ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಚಿನ್ಮಯಿ ಎಸ್ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ನಾಲ್ಕನೇ ಸ್ಥಾನ

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಚಿನ್ಮಯಿ ಎಸ್ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ನಾಲ್ಕನೇ ಸ್ಥಾನ

0Shares

ಮಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಡಿಸೆಂಬರ್‌ನಲ್ಲಿ ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯ ಸೀನಿಯರ್ ಗ್ರೇಡ್ ವಿಭಾಗದಲ್ಲಿ ಮಂಗಳೂರಿನ ಶಾರದ ವಿದ್ಯಾಲಯ ವಿದ್ಯಾರ್ಥಿನಿ ಚಿನ್ಮಯಿ ಎಸ್ ಅವರು ಅದ್ಭುತ ಸಾಧನೆಗೈದಿದ್ದಾರೆ.

536 ಅಂಕಗಳು (ಶೇ. 89.33) ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಚಿನ್ಮಯಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸಿದ್ದಾರೆ. ಅವರ ಈ ಸಾಧನೆ ಶಾಲೆಗೆ ಹಾಗೂ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ.

ಚಿನ್ಮಯಿ ಎಸ್ ಅವರು ಮಂಗಳೂರಿನ ಅತ್ತವರ ಬಾಬುಗುಡ್ಡೆ ನಿವಾಸಿಗಳಾದ ಶಾಂತಪ್ಪ ಯು ಮತ್ತು ನೀತಾ ದಂಪತಿಯ ಪುತ್ರಿಯಾಗಿದ್ದಾರೆ. ಅವರ ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now