ಶಿರ್ವ: ಗ್ರಾಮೀಣ ಕಾಂಗ್ರೆಸ್‌ನ ಸಾಮಾನ್ಯ ಸಭೆ

ಶಿರ್ವ: ಗ್ರಾಮೀಣ ಕಾಂಗ್ರೆಸ್‌ನ ಸಾಮಾನ್ಯ ಸಭೆ

0Shares

ಶಿರ್ವ ಗ್ರಾಮೀಣ ಕಾಂಗ್ರೆಸ್‌ನ ಸಾಮಾನ್ಯ ಸಭೆಯು ದಿನಾಂಕ: 18/12/2025 ರಂದು ಶಿರ್ವ ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮೆಲ್ವಿನ್ ಡಿಸೋಜರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ದಿ. ಶ್ರೀ ಇಗ್ನೇಶಿಯಸ್ ಡಿಸೋಜರವರ 2ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.
​ಹಿರಿಯ ಕಾಂಗ್ರೆಸ್ ನಾಯಕರಾದ ಶ್ರೀ ನೋರ್ಬರ್ಟ್ ಮಚಾದೊರವರು ದಿ. ಇಗ್ನೇಶಿಯಸ್ ಡಿಸೋಜರವರು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆ ಮತ್ತು ಮಂಡಲ ಪಂಚಾಯತ್ ಪ್ರಧಾನರಾಗಿದ್ದ ಸಂದರ್ಭದಲ್ಲಿ ಶಿರ್ವ ಗ್ರಾಮದ ಅಭಿವೃದ್ಧಿಗೆ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು. ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.
​ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶ್ರೀ ಹಸನಬ್ಬ ಶೇಖರವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ವಿಲ್ಸನ್ ರೊಡ್ರಿಗಸ್ ಮತ್ತು ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ರತನ್ ಕುಮಾರ್ ಶೆಟ್ಟಿಯವರು ಮುಂದಿನ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತ್ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗುವಂತೆ ಸಲಹೆ ನೀಡಿದರು.
​ಉಡುಪಿಯಲ್ಲಿ ನಡೆಯುವ ವೋಟ್ ಚೋರಿ ವಿರುದ್ಧದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಧ್ಯಕ್ಷರು ಕರೆ ನೀಡಿದರು. ಪಂಜಿಮಾರು ವಾರ್ಡ್ ನ ನೂತನ ಬೂತ್ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀಮತಿ ವಿನುತ ಕ್ಯಾಸ್ತಲಿನೋರವರನ್ನು ಸಭೆಯಲ್ಲಿ ಅಭಿನಂದಿಸಲಾಯಿತು.
​ಸಭೆಯಲ್ಲಿ ಶಿರ್ವ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೀರ್ತನ್ ಪೂಜಾರಿ, ಬೂತ್ ಅಧ್ಯಕ್ಷರು, ಬಿಎಲ್ಎ2 ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಹಾಜರಿದ್ದರು. ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಅಬ್ದುಲ್ ಲತೀಫರವರು ಧನ್ಯವಾದ ಸಲ್ಲಿಸಿದರು. ದಿ. ಇಗ್ನೇಶಿಯಸ್ ಡಿಸೋಜರವರ ಭಾವಚಿತ್ರಕ್ಕೆ ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿದರು.

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now