ಬಂಜಾರ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡಿದವರು ಸಂತ ಸೇವಾಲಾಲರು : ಎಂ ಎ ಗಫೂರ್

ಬಂಜಾರ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡಿದವರು ಸಂತ ಸೇವಾಲಾಲರು : ಎಂ ಎ ಗಫೂರ್

0Shares

ಉಡುಪಿ ಫೆಬ್ರವರಿ 15 (ಕ.ವಾ): ಬಂಜಾರ ಸಮುದಾಯವನ್ನು ಒಗ್ಗೂಡಿಸಿ ಶಕ್ತಿ ತುಂಬಿ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡಿದವರು ಶ್ರೀ ಸಂತ ಸೇವಾಲಾಲ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಯ ಅಧ್ಯಕ್ಷ ಎಂ ಎ ಗಫೂರ್ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಶ್ರೀ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀ ಸಂತ ಸೇವಾಲಾಲ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಸಂತ ಸೇವಲಾರರು ಸತ್ಯ ನಿಷ್ಠೆ ಮತ್ತು ಪ್ರಾಮಾಣಿಕತೆಗೆ ಹೆಸರಾದವರು
ವಚನ, ಉಪದೇಶಗಳ ಮೂಲಕ ಸಮಾಜದಲ್ಲಿನ ಮೂಢ ನಂಬಿಕೆಗಳನ್ನು ಹೋಗಲಾಡಿಸಿ ಸಮಾಜ ಸುಧಾರಣೆಗಾಗಿ ಅನೇಕ ರೀತಿಯಲ್ಲಿ ಕೊಡುಗೆಗಳನ್ನು ನೀಡಿದರು, ಎಂದ ಅವರು ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಮುಂದಾದ ಮಹಾನ್ ವ್ಯಕ್ತಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಭಕ್ತಿಪಂಥ ಕಾಲದಲ್ಲಿ ಸಮಾಜದ ವ್ಯವಸ್ಥೆ ತಿದ್ದಲು, ಶ್ರಮಿಸಿದ ಸಂತ ಶ್ರೀ ಸೇವಾಲಾಲರು ಬುಡಕಟ್ಟಿನ ಜನರಲ್ಲಿ ಧೈರ್ಯ ಮತ್ತು ಆತ್ಮಸ್ಥೈರ್ಯ ಮೂಡಿಸಿದ ಮಹಾನ್ ದಾರ್ಶನಿಕ. ಅವರ ಮಾರ್ಗದರ್ಶನದಂತೆ ಇಂದಿನ ಪೀಳಿಗೆ ಉತ್ತಮ ಶಿಕ್ಷಣವನ್ನು ಪಡೆದು ಸಮಾಜದ ಏಳಿಗೆಗಾಗಿ ಶ್ರಮಿಸುವಂತಾ
ಗಬೇಕು ಎಂದರು.

ಕಳತ್ತೂರು ಪಿ. ಕೆ. ಎಸ್ ಪ್ರೌಢ ಶಾಲೆಯ ಸಹಶಿಕ್ಷಕ ಸಂತೋಷ್ ಅ ರಾಠೋಡ ಶ್ರೀ ಸಂತ ಸೇವಾಲಾಲರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಎಸ್.ಎಸ್ ಎಲ್. ಸಿ ಪರೀಕ್ಷೆ ಯಲ್ಲಿ ಉತ್ತಮ ಅಂಕ ಪಡೆದ ಸಮುದಾಯದ ಅಂಜಲಿ ಇವರನ್ನು ಗೌರವಿಸಲಾಯಿತು.

ಉಡುಪಿ ಜಿಲ್ಲಾ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ ಬಂಜಾರ ಸಂಘದ ಅಧ್ಯಕ್ಷ ಕುಮಾರ್ ಕೆ. ಎಂ, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿ, ವರ್ಷಾ ಬಿ ಕೋಟ್ಯಾನ್ ನಿರೂಪಿಸಿ, ಕೃಷ್ಣನಗರಿ ಶ್ರೀ ಸಂತ ಸೇವಾಲಾಲ ಬಂಜಾರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಲಮಾಣಿ ವಂದಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now