.ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಭೇಟಿ ಮಾಡಿದ ಶಾಸಕ ಯಶ್ ಪಾಲ್ ಸುವರ್ಣ

.ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಭೇಟಿ ಮಾಡಿದ ಶಾಸಕ ಯಶ್ ಪಾಲ್ ಸುವರ್ಣ

0Shares

ಕರ್ನಾಟಕ ಕರಾವಳಿ ಜಿಲ್ಲೆಯ ಮೀನುಗಾರರು ಅಂತಾರಾಜ್ಯ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಎದುರಿಸುವ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಸರಕಾರದ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಶ್ರೀ ನಿತೇಶ್ ರಾಣೆಯವರನ್ನು ಅವರ ಸಚಿವಾಲಯದ ಕಚೇರಿಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭೇಟಿಯಾಗಿ ಮಾತುಕತೆ ನಡೆಸಿದರು.

ದೇಶದ ಪಶ್ಚಿಮ ಹಾಗೂ ಪೂರ್ವ ಕರಾವಳಿಯ ರಾಜ್ಯಗಳಲ್ಲಿ ಮೀನುಗಾರಿಕಾ ಚಟುವಟಿಕೆಗಳಲ್ಲಿ ಸಮನ್ವಯತೆ ಸಾಧಿಸಲು ರಾಷ್ಟ್ರೀಯ ಮೀನುಗಾರಿಕಾ ನೀತಿ ಜಾರಿಗೆ ತರಲು ಸಹಕಾರ ನೀಡುವ ಜೊತೆಗೆ ಎಲ್ಲಾ ರಾಜ್ಯಗಳ ಮೀನುಗಾರಿಕಾ ಸಚಿವರು ಹಾಗೂ ಮೀನುಗಾರ ಮುಖಂಡರನ್ನೊಳಗೊಂಡ ಸಮನ್ವಯ ಸಮಿತಿ ರಚನೆ ಮಾಡುವ ನಿಟ್ಟಿನಲ್ಲಿ ಕೈಜೋಡಿಸುವಂತೆ ಮನವಿ ಮಾಡಿ ಈಗಾಗಲೇ ಗೋವಾ ಸರ್ಕಾರದ ಮೀನುಗಾರಿಕಾ ಸಚಿವರೊಂದಿಗೆ ಚರ್ಚೆ ನಡೆಸಿರುವುದಾಗಿ ಮಾಹಿತಿ ನೀಡಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now