ಕುಂದಾಪುರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ವಿವಾದ: ಇಬ್ಬರು ಬಂಧನ

ಕುಂದಾಪುರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ವಿವಾದ: ಇಬ್ಬರು ಬಂಧನ

0Shares

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 22/02/2026 ರಂದು ಸಂಜೆ 06:00 ಗಂಟೆಗೆ ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಕಂಡ್ಲೂರು ಪೇಟೆಯಲ್ಲಿರುವ ಕಟಿಂಗ್ ಶೋಪ್ನಲ್ಲಿ ಹೇಳಿದ ವಿಷಯವನ್ನು ವಿಡಿಯೋ ಚಿತ್ರೀಕರಣ ಮಾಡಿ, ಅದನ್ನು ಸಾರ್ವಜನಿಕವಾಗಿ ಪ್ರಚೋದನೆ ಗೊಳಿಸಿ ಗಲಾಟೆ ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಬಗ್ಗೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ತಂದೆಯ ದೂರಿನ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಅಂತೆಯೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕಟಿಂಗ್ ಶಾಪ್ನ ಎದುರಗಡೆ ಜನರು ಗುಂಪುಗೂಡಿ, ಬೆದರಿಕೆ ಹಾಕಿರುವ ಬಗ್ಗೆ ಕಟ್ಟಿಂಗ್ ಶಾಪ್ ಮಾಲೀಕ ಶಶಾಂಕ ಭಂಡಾರಿ ನೀಡಿರುವ ದೂರಿನಂತೆ ಇನ್ನೊಂದು ಪ್ರಕರಣ ಕೂಡ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 20-30 ಜನರನ್ನು ಗುರುತಿಸಲಾಗಿದ್ದು, ಇವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

ಇನ್ನು 25-30 ಜನರನ್ನು ಗುರುತಿಸಲಾಗುತ್ತಿದ್ದು, ಅವರ ವಿರುದ್ಧವೂ ಸಹ ಕಾನೂನೂ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.

ಈ ಎರಡು ಪ್ರಕರಣವನ್ನು ದಾಖಲಿಸಿಕೊಂಡ ಕುಂದಾಪುರ ಗ್ರಾಮಾಂತರ ಪೊಲೀಸರು, ಸದ್ರಿ ಘಟನೆಗೆ ಸಂಬಂಧಿಸಿದ ಸ್ಥಳಕ್ಕೆ ಕೂಡಲೇ ಧಾವಿಸಿ ಕಾನೂನು ರೀತಿಯ ಕ್ರಮ ಕೈಗೊಂಡು ಆರೋಪಿಗಳಾದ 1) ಶಶಾಂಕ ಭಂಡಾರಿ(30), ತಂದೆ: ಮಂಜುನಾಥ ಭಂಡಾರಿ, ಜನತಾ ಕಾಲೋನಿ ಕಂಡ್ಲೂರು, ಕಾವ್ರಾಡಿ ಗ್ರಾಮ, ಕುಂದಾಪುರ ತಾಲೂಕು, 2) ಪ್ರಮೋದ ಡಿಸೋಜ(25), ತಂದೆ: ಪಿಯೂಸ್ ಡಿಸೋಜ, ಉದ್ದಿನಮಕ್ಕಿ, ಮರಾಸಿ, ಕಾವ್ರಾಡಿ ಗ್ರಾಮ, ಕುಂದಾಪುರ ತಾಲೂಕು ದಸ್ತಗಿರಿ ಮಾಡಿ ಮಾನ್ಯ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now