
ಶಿಬರಿ ಯುವಕ ಮಂಡಲ (ರಿ.) ಮಾಡತ್ತಡ್ಕ, ವಿಟ್ಲ ಮುಡೂರು, ಬಂಟ್ವಾಳ ತಾಲೂಕು, ಕರ್ನಾಟಕ ಇದರ ಆಶ್ರಯದಲ್ಲಿ ಶ್ರೀ ಮಲರಾಯಿ ಹಾಗೂ ಶ್ರೀ ಮೂವರ್ ದೈವಂಗಳ ನೇಮೋತ್ಸವದ ಪ್ರಯುಕ್ತ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಇದೇ ಮಾರ್ಚ್ 4, 2026ನೇ ಬುಧವಾರ ನಡೆಯಲಿವೆ.
ಬೆಳಿಗ್ಗೆ ಗಣಹೋಮ, ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾಪೂಜೆ ನಡೆಯಲಿದ್ದು, ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ. ಬಳಿಕ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ. ಬಳಿಕ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಭಕ್ತರ ಮನರಂಜನೆಗೆ ವಿವಿಧ ವಿನೋದ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ರಾತ್ರಿ ಕಲ್ಲಿಗದ ಕಾಳಿ ಮಂತ್ರದೇವತೆ ಎಂಬ ನಾಟಕ ಪ್ರದರ್ಶನ ಗೊಳ್ಳಲಿದೆ.
ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now