
ಬೆಳ್ತಂಗಡಿ : ಹಲವು ಸಮಯಗಳಿಂದ ರಸ್ತೆಗಳಲ್ಲಿ ವಿವಿಧ ಭಂಗಿಗಳಲ್ಲಿ ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ವೀಲಿಂಗ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಜಂಕ್ಷನ್ ರಸ್ತೆಯಲ್ಲಿ ಫೆ.8ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವೊ ಎಂಬವರು ಕರ್ತವ್ಯದ ವೇಳೆ ಹೆಲೈಟ್ ಧರಿಸದೆ ಆಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಯ ಪ್ರಾಣಕ್ಕೆ ಹಾನಿಯಾಗುವಂತೆ ವೀಲಿಂಗ್ ಮಾಡಿಕೊಂಡು ಧರ್ಮಸ್ಥಳ ರಸ್ತೆಯ ಮೂಲಕ ಪರಾರಿಯಾಗಿದ್ದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆಯ ವರದಿಯನ್ನು ಮಾಡಿದ್ದರು.
ಬಳಿಕ ಈತ ವಿವಿಧ ಕಡೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವಿಡಿಯೋಗಳನ್ನು ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು ಅದ್ರೆ ಸವಾರ ಮಾತ್ರ ಪೊಲೀಸರ ಕೈಗೆ ಸಿಗುತ್ತಿರಲಿಲ್ಲ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now