
ಉಡುಪಿ ಮಾರ್ಚ್ 10 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಮಿಕ ರೋಗಗಳ ಘಟಕ ಎನ್.ಸಿ.ಡಿ, ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ಹಾಗೂ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಡಾ.ಆಮ್ನಾ ಹೆಗ್ಡೆ ಮಾತನಾಡಿ, ಈ ಹಿಂದೆ ಅಬಲೆಯೆಂದು ಕರೆಸಿಕೊಳ್ಳುತ್ತಿದ್ದ ಮಹಿಳೆಯರು ಇಂದು ಸಬಲೆಯಾಗಿ, ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆ, ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪುರುಷರಷ್ಟೇ ಸರಿಸಮಾನರಾಗಿ ಸ್ಥಾನ ಪಡೆದಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ಜನ್ ಡಾ.ಹೆಚ್ ಅಶೋಕ ಮಾತನಾಡಿ, ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಮಹಿಳೆಯರ ಸಾಮಾಜಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗೌರವಿಸಲು ಹಾಗೂ ಲಿಂಗ ಸಮಾನತೆಗಾಗಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಮಹಿಳಾ ಸಬಲೀಕರಣ, ಹಕ್ಕುಗಳ ರಕ್ಷಣೆ, ತಾರತಮ್ಯದ ನಿರ್ಮೂಲನೆ ಮತ್ತು ಸಮಾಜದಲ್ಲಿ ಮಹಿಳೆಯರ ಕೊಡುಗೆಯನ್ನು ಸ್ಮರಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಗೌರವದಿಂದ ಕಾಣಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಷರಾದ ಡಾ.ಉಷಾ ಹಾಗೂ ನರ್ಸಿಂಗ್ ಅಧಿಕಾರಿ ಅರುಣ ಇವರು ಮಹಿಳಾ ದಿನಾಚರಣೆಯ ಬಗ್ಗೆ ಮತಾನಾಡಿದರು.
ವೈದ್ಯಕೀಯ ತಜ್ಞರಾದ ಡಾ.ದೆಯಮಣಿ, ಡಾ. ದಿವ್ಯ, ಬ್ಲಡ್ ಬ್ಯಾಂಕ್ ಮೆಡಿಕಲ್ ಆಫೀಸರ್ ಡಾ. ವೀಣಾ ಕುಮಾರಿ, ಎಂ.ಸಿ.ಕೆ.ಎಸ್ ಫುಡ್ ಫಾರ್ ದಿ ಹಂಗ್ರೀ ಫೌಂಡೇಶನ್ ನ ನಿಧಿ, ಆಸ್ಪತ್ರೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ರತ್ನವತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಎನ್.ಸಿ.ಡಿ ಯ ಜಿಲ್ಲಾ ಸಮಾಲೋಚಕಿ ಡಾ.ಅಂಜಲಿ ಹಾಗೂ ಆಪ್ತ ಸಮಾಲೋಚಕ ಮನು. ಎಸ್. ನಿರೂಪಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now