ಉಡುಪಿ ಜಿಲ್ಲೆಯ ಇಬ್ಬರಿಗೆ ಗಡಿಪಾರು ಆದೇಶ*

ಉಡುಪಿ ಜಿಲ್ಲೆಯ ಇಬ್ಬರಿಗೆ ಗಡಿಪಾರು ಆದೇಶ*

0Shares

ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಮಹಮ್ಮದ್‌ ನೌಫಿಲ್‌ ಹಾಗೂ ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಹಾನ್‌ ಪೂಜಾರಿ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ರವರು ದಿನಾಂಕ 26.03.2026 ರಂದು ಗಡಿಪಾರು ಆದೇಶ ಹೊರಡಿಸಿರುತ್ತಾರೆ.

ಈ ಪೈಕಿ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಮಹಮ್ಮದ್‌ ನೌಫಿಲ್‌, ತಂದೆ: ಅಬ್ದುಲ್‌ ಖಾದರ್‌, ವಾಸ: ಸೂರ್ಯಗುಡ್ಡೆ, ಕಳತ್ತೂರು ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಈತನ ವಿರುದ್ಧ 5 ಪ್ರಕರಣ ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ.

ಅಂತೆಯೇ ಮಲ್ಪೆ ಠಾಣಾ ವ್ಯಾಪ್ತಿಯ ಸುಹಾನ್‌ ಪೂಜಾರಿ, ತಂದೆ: ಸುನೇತ್ರ ಹೆಚ್, ವಾಸ: 4-66, ಆಶೀರ್ವಾದ, ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ, ಮಲ್ಪೆ, ಕೊಡವೂರು ಗ್ರಾಮ, ಉಡುಪಿ ತಾಲೂಕು ಮತ್ತು ಜಿಲ್ಲೆ ಈತನ ವಿರುದ್ಧ 4 ಪ್ರಕರಣ ದಾಖಲಾಗಿರುತ್ತದೆ.

ಮಹಮ್ಮದ್‌ ನೌಫಿಲ್‌ ಈತನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಸುಹಾನ್‌ ಪೂಜಾರಿ ಈತನನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now