
ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಇಂದು ದಿನಾಂಕ 10-04-2026 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಒಂದು ಭಾಗದ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು ಇಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀನಿವಾಸ್ ಕಿಣಿ, ಕವಿತಾ ಸುವರ್ಣ, ಕುರ್ಕಾಲು ಗ್ರಾಮ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುದರ್ಶನ್ ಭಟ್, ಎಂ.ಜಿ ನಾಗೇಂದ್ರ, ಏಣಗುಡ್ಡೆ ಶಕ್ತಿ ಕೇಂದ್ರದ ಸಂತೋಷ್, ಕೋಟೆ ಶಕ್ತಿ ಕೇಂದ್ರದ ಹರ್ಷಿತ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷರಾದ ವೀಣಾ ಶೆಟ್ಟಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು


ನಮ್ಮ ವರದಿಗಾರರು
ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now