
ಉಡುಪಿ: ಶಿವ ಬೇರೆಯವರ ದೋಷವನ್ನು ಕಂಠದಲ್ಲಿ ಹಾಗೂ ಬೇರೆಯವರ ಉತ್ತಮ ಗುಣಗಳನ್ನು ಚಂದಿರನಂತೆ ತಲೆಯ ಮೇಲೆ ಹೊತ್ತುಕೊಂಡಂತೆ ನಾವು ಇನ್ನೊಬ್ಬರ ದೋಷಗಳ ಬದಲು ಅವರ ಸದ್ಗುಣಗಳ ಪ್ರಚಾರ ಮಾಡಿದಲ್ಲಿ ಸಮಾಜದಲ್ಲಿ ಧನಾತ್ಮಕ ವಾತಾವರಣ ನಿರ್ಮಾಣ ಮಾಡಬಹುದು. ರುದ್ರ ದೇವರ ಆರಾಧನೆ ಮಾಡಿ ಅವರ ಗುಣಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು.
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವ ಪ್ರಯುಕ್ತ ರವಿವಾರ ಡಾ| ನಾಡೋಜ ಜಿ. ಶಂಕರ್ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀಪಾದರು ಆಶೀರ್ವಚನ ನೀಡಿದರು. ಮಾಜಿ ಶಾಸಕ ರಘುಪತಿ ಭಟ್ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಅವರು, ಭಕ್ತಾಭಿಮಾನಿಗಳು ಇಂದು ಸಾವಿರಾರು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಬರುತ್ತಾರೆ. ಪ್ರತೀ ದೇವಸ್ಥಾನದಲ್ಲಿಯೂ ಕೂಡ ಒಂದು ಅದ್ಬುತ ಶಕ್ತಿ ಇದೆ. ಆ ಶಕ್ತಿಯನ್ನು ಶ್ರೀ ದೇವರು ನಮಗೆ ಕರುಣಿಸಲಿ ಎಂದು ಭಕ್ತರು ದೇವರ ಸ್ಮರಣೆ ಮಾಡುತ್ತಾರೆ. ಇಂದು ದೇವಸ್ಥಾನಕ್ಕೆ ಆಗಮಿಸಿದ ಲಕ್ಷಾಂತರ ಭಕ್ತರು ದೇವರ ಸ್ಮರಣೆ ಮಾಡಿದಾಗ, ದೇವರು ಖಂಡಿತವಾಗಿ ನಮಗೆ ಅದ್ಬುತ ಶಕ್ತಿಯನ್ನು ಕರುಣಿಸುತ್ತಾನೆ. ಶ್ರೀ ಮಹಾಲಿಂಗೇಶ್ವರ ದೇವರು ಭಕ್ತರ ಸಕಲ ಕಷ್ಟಗಳನ್ನು ನಿವಾರಿಸಿ ಇಷ್ಟಾರ್ಥವನ್ನು ಈಡೇರಿಸಲಿ ಎಂದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now