ಉಡುಪಿ ಸಾಹಿತ್ಯ ಸಮ್ಮೇಳನದಲ್ಲಿ ಸತೀಶ್ ಪೂಜಾರಿ ಕೀಳಂಜೆ ಅವರಿಗೆ ‘ಉತ್ತಮ ಸಾಧಕ ಪ್ರಶಸ್ತಿ’ ಗೌರವ

ಉಡುಪಿ ಸಾಹಿತ್ಯ ಸಮ್ಮೇಳನದಲ್ಲಿ ಸತೀಶ್ ಪೂಜಾರಿ ಕೀಳಂಜೆ ಅವರಿಗೆ ‘ಉತ್ತಮ ಸಾಧಕ ಪ್ರಶಸ್ತಿ’ ಗೌರವ

0Shares

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ವತಿಯಿಂದ ಉಡುಪಿ ನಗರದ ಯಕ್ಷಗಾನ ಕಲರಂಗ (ಐ.ವೈ.ಸಿ) ಹವಾ ನಿಯಂತ್ರಿತ ಸಭಾಂಗಣದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಸಮಾಜ ಸೇವಕ ಸತೀಶ್ ಪೂಜಾರಿ ಕೀಳಂಜೆ ಅವರಿಗೆ ‘ಉತ್ತಮ ಸಾಧಕ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು.

ಶಾರದ ಕಲ್ಯಾಣ ಮಂಟಪ ರಸ್ತೆಯ ಕೆಮ್ತೂರು ದೊಡ್ಡನಶೆಟ್ಟಿ ವೇದಿಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಸರಳ ಹಾಗೂ ಸಜ್ಜನ ವ್ಯಕ್ತಿತ್ವ ಹೊಂದಿರುವ ಸತೀಶ್ ಪೂಜಾರಿ ಅವರ ಸಮಾಜ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಸುಮಾರು 15 ವರ್ಷಗಳಿಂದ ಉಡುಪಿ ಜಿಲ್ಲೆ ಮತ್ತು ಬ್ರಹ್ಮಾವರ ತಾಲೂಕಿನಲ್ಲಿ ಸಕ್ರಿಯವಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅವರು, ಹಲವು ದೈವ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಿಂದ ಹಾಗೂ ಮೂರು ಗ್ರಾಮ ಪಂಚಾಯಿತಿಗಳಿಂದ ಸನ್ಮಾನಿತರಾಗಿದ್ದಾರೆ.

ರಸ್ತೆ ಅಪಘಾತಗಳನ್ನು ತಡೆಗಟ್ಟುವಲ್ಲಿ ಜಾಗೃತಿ ಮೂಡಿಸುವುದು, ರಸ್ತೆ ಅಭಿವೃದ್ಧಿಗೆ ಸಹಕಾರ ನೀಡುವುದು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಅವರ ಸೇವೆಯನ್ನು ಪೊಲೀಸ್ ಇಲಾಖೆಯೂ ಗುರುತಿಸಿ ಸನ್ಮಾನಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಸತೀಶ್ ಪೂಜಾರಿ ಅವರಂತಹ ಸಮಾಜ ಸೇವಕರು ಇತರರಿಗೆ ಮಾದರಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು. ಅವರ ಮುಂದಿನ ಜೀವನದಲ್ಲಿ ಇನ್ನಷ್ಟು ಯಶಸ್ಸು ದೊರಕಲಿ ಎಂದು ಹಾರೈಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now