40 ಲಕ್ಷ ವೆಚ್ಚದಲ್ಲಿ 2 ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ

40 ಲಕ್ಷ ವೆಚ್ಚದಲ್ಲಿ 2 ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ

0Shares

ಉಡುಪಿ ನಗರಸಭಾ ವ್ಯಾಪ್ತಿಯ ಇಂದ್ರಾಳಿ ವಾರ್ಡಿನ ಮಂಚಿ ಕುಮೇರಿ ಹಾಗೂ ಬನ್ನಂಜೆ ವಾರ್ಡಿನ ಮೀನು ಮಾರುಕಟ್ಟೆ ಬಳಿಯ 2 ನೂತನ ಅಂಗನವಾಡಿ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿ ಚಾಲನೆ ನೀಡಿದರು.

ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ವಿದ್ಯಾರ್ಥಿ ಜೀವನದ ಶೈಕ್ಷಣಿಕ ಸಾಧನೆಗೆ ಅಡಿಪಾಯವಾಗಿರುವ ಅಂಗನವಾಡಿ ಕೇಂದ್ರಗಳು ಪುಟಾಣಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಪೌಷ್ಟಿಕ ಆಹಾರದ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡುತ್ತಿದೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ಆದಿ ಉಡುಪಿ ಹಾಗೂ ಮಂಚಿ ಕುಮೇರಿ ಅಂಗನವಾಡಿ ಕೇಂದ್ರದ ನಿರ್ಮಾಣಕ್ಕೆ ತಲಾ 20 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡು ಸ್ಥಳೀಯ ಪುಟಾಣಿಗಳ ಶಿಕ್ಷಣಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ದಿನಕರ ಹೇರೂರು, ಮಾಜಿ ನಗರಸಭಾ ಸದಸ್ಯರಾದ ಶ್ರೀ ಅಶೋಕ್ ನಾಯ್ಕ್, ಶ್ರೀಮತಿ ಕಲ್ಪನಾ ಸುಧಾಮ, ಶ್ರೀ ಹರೀಶ್ ರಾಮ್, ಶ್ರೀಮತಿ ಸವಿತಾ ಹರೀಶ್ ರಾಮ್, ಶ್ರೀ ರಮೇಶ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಶ್ರೀ ಜಗದೀಶ್ ಆಚಾರ್ಯ, ಸ್ಥಳೀಯ ಮುಖಂಡರು, ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now