
ಶಿರ್ವ: ಶುಕ್ರವಾರ ಬೆಳಿಗ್ಗೆ 9.45 ಗಂಟೆಗೆ ಶಿರ್ವ ಮುಖ್ಯ ರಸ್ತೆಯಲ್ಲಿರುವ ಫೀನಿಕ್ಸ್ ಆರ್ಕೇಡ್ ಮುಂಭಾಗದಲ್ಲಿ ಸರಣಿ ಅಪಘಾತ ನಡೆದಿದೆ. ಫೀನಿಕ್ಸ್ ಆರ್ಕೇಡ್ ಮುಂಭಾಗದಲ್ಲಿ ನಿಲ್ಲಿಸಿದ್ದ ಹೀರೋ ಪ್ಯಾಶನ್ ಬೈಕ್ಗೆ ಹಿಂದಿನಿಂದ ವೇಗವಾಗಿ ಬಂದ ಸ್ಕೋಡ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಕಾರಿನ ಅಡಿಯಲ್ಲಿ ಬಿದ್ದು ನುಗ್ಗುಜ್ಜಾಗಿದೆ ಅಪಘಾತದ ರಭಸಕ್ಕೆ ಮುಂದೆ ಪಾರ್ಕ್ ಮಾಡಿರುವ ಹುಂಡೈ ಕಾರಿಗೆ ಹಿಂದಿನಿಂದ ಹೊಡೆದು ಮುಂದಿರುವ ವಿದ್ಯುತ್ ಕಂಬಕ್ಕೆ ಗುದ್ದಿ ಕಾರು ಜಕಂ ಆಗಿರುತ್ತದೆ. ಅತಿ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ತಿಳಿಸಿರುತ್ತಾರೆ. ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಹಾಗೂ ಯಾರಿಗೂ ಹಾನಿಯಾಗಿರುವುದಿಲ್ಲ ಘಟನೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆಯಾಗಿದ್ದು ತಕ್ಷಣ ಶಿರ್ವ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮರಬದ ನೇತೃತ್ವದಲ್ಲಿ ಹೆಡ್ ಕಾನ್ಸ್ಟೇಬಲ್ ರಾಜೇಶ್ ಬಾರ್ಕೂರು ಹಾಗೂ 112 ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಾರ್ವಜನಿಕರನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು ಈ ಪ್ರಕರಣವನ್ನು ಪೊಲೀಸರು ಠಾಣೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿರ್ವ ಪೇಟೆಯಲ್ಲಿ ಅಂಗಡಿ ಮುಂಗಟ್ಟುಗಳ ಮುಂದೆ ವಾಹನ ಪಾರ್ಕ್ ಮಾಡಿರುವುದರಿಂದ ಇಂತಹ ಅನಾಹುತಗಳು ಸಂಭವಿಸಿರುತ್ತವೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತದೆ
ನಮ್ಮ ವರದಿಗಾರರು
ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now