ಸಮಗ್ರ ಕೃಷಿ ಸಮೂಹಗಳಡಿ ಜೀವನೋಪಾಯ ಕೇಂದ್ರ

ಸಮಗ್ರ ಕೃಷಿ ಸಮೂಹಗಳಡಿ ಜೀವನೋಪಾಯ ಕೇಂದ್ರ

0Shares

ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಸಮಗ್ರ ಕೃಷಿ ಸಮೂಹಗಳಡಿ ಜೀವನೋಪಾಯ ಕೇಂದ್ರವನ್ನು ಸ್ಥಾಪಿಸಲಾಗಿದ್ದು ಇದರ ಅಡಿಯಲ್ಲಿ ಟ್ರ್ಯಾಕ್ಟರ್, ರೋಟವೇಟರ್, ಕಲ್ಟಿವೇಟರ್, ಹುಲ್ಲು ಕತ್ತರಿಸುವ ಯಂತ್ರ, ತೆಂಗು ಹಾಗೂ ಅಡಿಕೆ ಮರ ಹತ್ತುವ ಯಂತ್ರ ಮತ್ತು ಟಾಟಾ ಏಸ್ ಗಾಡಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಉಡುಪಿ ತಾಲೂಕಿನ ಸಂಜೀವಿನಿ ಒಕ್ಕೂಟಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್, ಉಡುಪಿ ತಾಲೂಕು ಪಂಚಾಯತ್ ಇ.ಓ. ವಿಜಯ ಅಲೆವೂರು, ಪಿ.ಡಿ.ಓ. ಪ್ರವೀಣ್ ಡಿ’ಸೋಜಾ, ಜಿಲ್ಲಾ ಪಂಚಾಯತ್ ಅಧೀಕ್ಷಕರಾದ ವಸಂತಿ, ಜಿಲ್ಲಾ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿ, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸಂಜೀವಿನಿ ಸಂಘದ ಮಹಿಳೆಯರು, ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು, ಕೃಷಿ ಸಖಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now