
ಕಾರ್ಕಳ ಸಾಣೂರು ನಿವಾಸಿ ಪ್ರಭಾತ್ ಶೆಟ್ಟಿ ಎಂಬವರು ಮಲ್ಪೆ ಉದ್ದಿನಹಿತ್ಲು ಎಂಬಲ್ಲಿ ಮಧ್ವನಗರ ನಿವಾಸಿ ಚೇತನ್ ಎಂಬವರ ಜಾಗದಲ್ಲಿ ಬಾವಿ ನಿರ್ಮಾಣ ಕೆಲಸಕ್ಕೆಂದು ಕಾರ್ಕಳ ಬಸ್ ನಿಲ್ದಾಣದ ಬಳಿಯಿಂದ ಕೊಪ್ಪಳ ಜಿಲ್ಲೆಯ 5 ಜನ ಕೂಲಿ ಕಾರ್ಮಿಕರನ್ನು ಕರೆತಂದು ನಿನ್ನೆ ದಿನಾಂಕ 21/05/2026 ಮತ್ತು ಈ ದಿನ ದಿನಾಂಕ 22/05/2026 ರಂದು ಬಾವಿಯಿಂದ ಮಣ್ಣು ತೆಗೆಯುವ ಕೆಲಸ ಮಾಡಿಸಿರುತ್ತಾರೆ. ಈ ದಿನ ದಿನಾಂಕ 22/05/2026 ರಂದು ಸಂಜೆ 5:00 ಗಂಟೆ ಸುಮಾರಿಗೆ ಕೆಲಸ ಬಿಡುವ ಸಮಯಕ್ಕೆ ರಮೇಶ ಪ್ರಾಯ: 25 ವರ್ಷ ಈತನು ಬಾವಿಯಲ್ಲಿ ಮಣ್ಣು ತೆಗೆಯುವ ಕೆಲಸ ಮಾಡುತ್ತಿರುವಾಗ ಬಾವಿಯ ದಂಡೆಯ ಮಣ್ಣು ಒಮ್ಮೆಲೆ ಕುಸಿದು ರಮೇಶನ ಮೈಮೇಲೆ ಬಿದ್ದು, ಮಣ್ಣಿನಲ್ಲಿ ಹೂತು ಹೋಗಿರುತ್ತಾನೆ. ಸ್ಥಳದಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಯವರೊಂದಿಗೆ ಸ್ಥಳೀಯ ಸಹಕಾರದಲ್ಲಿ ತುರ್ತು ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು.
ನಮ್ಮ ವರದಿಗಾರರು
ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now