ಶಿರ್ವ ಪೊಲೀಸರ ಕಾರ್ಯಾಚರಣೆ: CEIR ಮೂಲಕ ಪತ್ತೆಯಾದ ಮೊಬೈಲ್‌ಗಳು ಮಾಲೀಕರಿಗೆ ಮರುಹಸ್ತಾಂತರ

ಶಿರ್ವ ಪೊಲೀಸರ ಕಾರ್ಯಾಚರಣೆ: CEIR ಮೂಲಕ ಪತ್ತೆಯಾದ ಮೊಬೈಲ್‌ಗಳು ಮಾಲೀಕರಿಗೆ ಮರುಹಸ್ತಾಂತರ

0Shares

Central Equipment Identity Register (CEIR) ಪೋರ್ಟಲ್ ಮೂಲಕ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಎರಡು ಮೊಬೈಲ್ ಫೋನ್‌ಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿ, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ವಾರಸುದಾರರಿಗೆ ಶಿರ್ವ ಠಾಣಾ Asi ಶ್ರೀಧರ್ ಹಾಗೂ Asi ಸುರೇಶ ಹಸ್ತಾಂತರಿಸಿದರು

ಮೊಬೈಲ್ ಫೋನ್ ಕಳೆದುಕೊಂಡಿದ್ದ ಸಾರ್ವಜನಿಕರು ಠಾಣೆಯಲ್ಲಿ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ, ಶಿರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ ಮರಬದ ಹಾಗೂ ಸಿಬ್ಬಂದಿ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ತನಿಖೆ ನಡೆಸಿ, ವಿವಿಧ ಪ್ರದೇಶಗಳಲ್ಲಿ ಬಳಕೆಯಲ್ಲಿದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚಿದರು.

ಈ ಕಾರ್ಯಾಚರಣೆಯಲ್ಲಿ ಸಾರ್ವಜನಿಕರ ಸಹಕಾರವೂ ಮಹತ್ವದ ಪಾತ್ರ ವಹಿಸಿದ್ದು, ಕಳೆದುಹೋದ ಮೊಬೈಲ್‌ಗಳನ್ನು ಮರಳಿ ಪಡೆದ ವಾರಸುದಾರರು ಶಿರ್ವ ಪೊಲೀಸರ ಕಾರ್ಯಕ್ಷಮತೆಯನ್ನು ಮೆಚ್ಚಿದರು.

ಸಾರ್ವಜನಿಕರು ತಮ್ಮ ಮೊಬೈಲ್ ಕಳೆದುಹೋದ ತಕ್ಷಣವೇ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, CEIR ಪೋರ್ಟಲ್‌ನಲ್ಲಿ ಮಾಹಿತಿಯನ್ನು ನೋಂದಾಯಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now