ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರ-2025 ಕ್ಕೆ ಫ್ಲಾವಿಯಾ ಅಲ್ಬುಕರ್ಕ್ ಪುತ್ತೂರು ಅವರ ‘ಸಖಿ ಸೂಸಿದ ಸೌಗಂಧ’ ಪುಸ್ತಕ ಆಯ್ಕೆ

ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರ-2025 ಕ್ಕೆ ಫ್ಲಾವಿಯಾ ಅಲ್ಬುಕರ್ಕ್ ಪುತ್ತೂರು ಅವರ ‘ಸಖಿ ಸೂಸಿದ ಸೌಗಂಧ’ ಪುಸ್ತಕ ಆಯ್ಕೆ
0Shares

ಉಡುಪಿ: ಫ್ರಾನ್ಸಿಸ್ ದಾಂತಿ ಸ್ಮಾರಕ ಪ್ರತಿಷ್ಠಾನ ಮತ್ತು ಕಥೋಲಿಕ್ ಸಭಾ ಉಡುಪಿ ಪ್ರದೇಶ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಟ್ಟದ ದಿ. ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರ-2025 ಕವಯತ್ರಿ ಫ್ಲಾವಿಯಾ ಅಲ್ಬುಕರ್ಕ್ ಪುತ್ತೂರು ಅವರ ಸಖಿ ಸೂಸಿದ ಸೌಗಂಧ ಕವನ ಸಂಕಲನಕ್ಕೆ ಲಭಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರಾಗಿರುವ ಫ್ಲಾವಿಯಾ ಅಲ್ಬುಕರ್ಕ್ ಅವರು ಕನ್ನಡ ಸಾಹಿತ್ಯದಲ್ಲಿ ಅಭಿರುಚಿ ಹೊಂದಿದವರಾಗಿದ್ದಾರೆ;.
ಪ್ರಶಸ್ತಿಯು 25000ರೂ. ನಗದು, ಸ್ಮರಣಿಕೆಯನ್ನು ಹೊಂದಿದ್ದು ಜೂನ್ 14 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಶಿರ್ವ ಆರೋಗ್ಯ ಮಾತಾ ಚರ್ಚಿನ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ದಿ. ಫ್ರಾನ್ಸಿಸ್ ದಾಂತಿ ಸ್ಮಾರಕ ಪುರಸ್ಕಾರ ಸಮಿತಿಯ ಆಲ್ಫೋನ್ಸ್ ಡಿಕೋಸ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ವರದಿಗಾರರು

ಸ್ಟೀವನ್ ಕುಲಾಸೊ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now