
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಲಾಗಿದ್ದು, ಅವರಿಂದ ಕಳವು ಮಾಡಿದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ನಿವಾಸಿ ಡಿ. ಮುರಳಿ ಅವರ ಮನೆಯಲ್ಲಿ 2026ರ ಏಪ್ರಿಲ್ 5ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಅಪರಾಧ ಪತ್ತೆ ತಂಡವು ಮೇ 15ರಂದು ಹಮೀದ್ @ ಅಬ್ದುಲ್ ಹಮೀದ್ ಎಂಬಾತನನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಆಕ್ಟೋ ಕಾರನ್ನು ವಶಪಡಿಸಿಕೊಂಡಿತ್ತು.
ಆತನಿಂದ ದೊರೆತ ಮಾಹಿತಿಯ ಮೇರೆಗೆ ಜೂನ್ 7ರಂದು ಇನ್ನೋರ್ವ ಆರೋಪಿ ಅಬ್ದುಲ್ ಜಾಬೀರ್ @ ಜಾಬಿಯನ್ನು ಬಂಧಿಸಲಾಗಿದೆ. ಬಂಧಿತರಿಂದ ಪುಂಜಾಲಕಟ್ಟೆ ಠಾಣೆ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ, ₹2 ಲಕ್ಷ ನಗದು, ಉಪ್ಪಿನಂಗಡಿ ಠಾಣೆ ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಹಾಗೂ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now