
ಶಿರ್ವ, ಜೂನ್ 9: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ತಡೆಗಟ್ಟುವ ಕುರಿತು ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಶಿರ್ವ ಮಹಿಳಾ ಸೌಧದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯ ಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ, ಶಿರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ ಮರಬದ ಹಾಗೂ ಕ್ರೈಂ ಎಸ್ಐ ಲೋಹಿತ್ ಕುಮಾರ್ ಉಪಸ್ಥಿತರಿದ್ದರು.
ಶಿರ್ವ ಠಾಣಾ ವ್ಯಾಪ್ತಿಯ ಬ್ಯಾಂಕ್ಗಳು, ಜ್ಯುವೆಲ್ಲರಿ ಅಂಗಡಿಗಳು, ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರು, ಧಾರ್ಮಿಕ ಕೇಂದ್ರಗಳು, ಬ್ಯಾಂಕ್ಗಳು ಹಾಗೂ ಜ್ಯುವೆಲ್ಲರಿ ಅಂಗಡಿಗಳಲ್ಲಿ ಗುಣಮಟ್ಟದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ತಿಳಿಸಿದರು. ಎಲ್ಲಾ ಬ್ಯಾಂಕ್ಗಳಲ್ಲಿ ಪ್ಯಾನಿಕ್ ಬಟನ್ ವ್ಯವಸ್ಥೆ ಕಡ್ಡಾಯವಾಗಿರಬೇಕು. ಭದ್ರತಾ ಸಿಬ್ಬಂದಿಯನ್ನು ನೇಮಿಸುವ ಸಂದರ್ಭದಲ್ಲಿ 40 ರಿಂದ 60 ವರ್ಷ ವಯೋಮಿತಿಯೊಳಗಿನ ತರಬೇತಿ ಪಡೆದ ಸಿಬ್ಬಂದಿಯನ್ನು ನೇಮಿಸಿದರೆ ಉತ್ತಮ ಎಂದು ಸಲಹೆ ನೀಡಿದರು.
ಸೈಬರ್ ಅಪರಾಧ ಪ್ರಕರಣಗಳಲ್ಲಿ ಬ್ಯಾಂಕ್ ವ್ಯವಸ್ಥಾಪಕರು ಹೆಚ್ಚಿನ ಜಾಗರೂಕತೆ ವಹಿಸಿ, ಅನುಮಾನಾಸ್ಪದ ವ್ಯವಹಾರಗಳ ಬಗ್ಗೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೆ ಅನೇಕ ಅಪರಾಧಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಬ್ಯಾಂಕ್ಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ನೈಟ್ ವಿಷನ್ ಸೌಲಭ್ಯ ಹೊಂದಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಕ್ಯಾಮೆರಾಗಳ ಸ್ಟೋರೇಜ್ ಡ್ರೈವ್ಗಳನ್ನು ಸಾರ್ವಜನಿಕರಿಗೆ ಕಾಣದ ರೀತಿಯಲ್ಲಿ ಸುರಕ್ಷಿತವಾಗಿ ಇರಿಸಬೇಕು. ಇದರ ಜೊತೆಗೆ ಸಂಬಂಧಿತ ಅಧಿಕಾರಿಗಳ ಬಳಿ ದಾಖಲೆಗಳ ಬ್ಯಾಕಪ್ ಸಂಗ್ರಹಿಸಿಟ್ಟರೆ ಅಪರಾಧಿಗಳ ಪತ್ತೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಕಳ್ಳತನ ನಡೆದ ನಂತರ ಎಚ್ಚೆತ್ತುಕೊಳ್ಳುವುದಕ್ಕಿಂತ ಮುಂಚಿತವಾಗಿಯೇ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯವಾಗಿದೆ. ಅಂಗಡಿಗಳು, ಬ್ಯಾಂಕ್ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಅವರು ಮನವಿ ಮಾಡಿದರು.
ಇತ್ತೀಚೆಗೆ ಜಾರಿಗೆ ತರಲಾದ “ಲಾಕ್ಡ್ ಹೌಸ್ ಬೀಟ್ ಸಿಸ್ಟಮ್” ಕುರಿತು ಮಾಹಿತಿ ನೀಡಿದ ಅವರು, ಸಾರ್ವಜನಿಕರು ತಮ್ಮ ಮನೆಗಳಿಗೆ ಬೀಗ ಹಾಕಿ ಹೊರಗಡೆ ಹೋಗುವ ಸಂದರ್ಭದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರೆ, ಬೀಟ್ ಪೊಲೀಸ್ ಸಿಬ್ಬಂದಿ ರಾತ್ರಿ ವೇಳೆ ಎರಡು ಬಾರಿ ನಿಗಾ ವಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಪ್ರತಿಯೊಬ್ಬರೂ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯ ಎಸ್ಐ ಹಾಗೂ ಬೀಟ್ ಪೊಲೀಸ್ ಸಿಬ್ಬಂದಿಯ ದೂರವಾಣಿ ಸಂಖ್ಯೆಯನ್ನು ಹೊಂದಿರಬೇಕು ಎಂದರು.
ಸೈಬರ್ ವಂಚಕರಿಂದ ಕರೆಗಳು ಬಂದಲ್ಲಿ ಯಾವುದೇ ಆತುರದ ನಿರ್ಧಾರ ಕೈಗೊಳ್ಳದೆ ಸಂಬಂಧಿತ ಬ್ಯಾಂಕ್ ಅಥವಾ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು. ತುರ್ತು ಸಂದರ್ಭದಲ್ಲಿ 112 ಸಹಾಯವಾಣಿಗೆ ಕರೆ ಮಾಡಿದರೆ ಅತಿ ಕಡಿಮೆ ಸಮಯದಲ್ಲಿ ನೆರವು ಒದಗಿಸುವ ವ್ಯವಸ್ಥೆ ಪೊಲೀಸ್ ಇಲಾಖೆಯಲ್ಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಿವೈಎಸ್ಪಿ ಎಸ್. ವಿಜಯ ಪ್ರಸಾದ್ ಅವರು, ಶಿರ್ವ ಪೊಲೀಸ್ ಠಾಣೆಯಲ್ಲಿ ಸಮರ್ಥ ಹಾಗೂ ಕರ್ತವ್ಯನಿಷ್ಠ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಠಾಣಾಧಿಕಾರಿ ಮಂಜುನಾಥ ಮರಬದ ಹಾಗೂ ಕ್ರೈಂ ಎಸ್ಐ ಲೋಹಿತ್ ಕುಮಾರ್ ಅವರ ಸೇವೆಯನ್ನು ಶಿರ್ವ ಪ್ರದೇಶವು ಮುಂದುವರಿಸಿಕೊಂಡು ಹೋಗಬೇಕು ಎಂದು ಅಭಿಪ್ರಾಯಪಟ್ಟರು. ಉಡುಪಿ ಜಿಲ್ಲೆಯಲ್ಲಿಯೇ ಈ ರೀತಿಯ ಜಾಗೃತಿ ಕಾರ್ಯಕ್ರಮವನ್ನು ಪ್ರಥಮ ಬಾರಿಗೆ ಶಿರ್ವದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಸಮಾರೋಪದಲ್ಲಿ ಶಿರ್ವ ಠಾಣೆಯ ಎಸ್ಐ ಮಂಜುನಾಥ ಮರಬದ ಅವರು, ಶಿರ್ವ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಬ್ಯಾಂಕ್ಗಳ ಸಿಎಸ್ಆರ್ ನಿಧಿಯ ಸಹಾಯದಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸಹಕಾರ ನೀಡುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ಅಭಿನಂದಿಸಿ ಧನ್ಯವಾದ ಸಲ್ಲಿಸಿದರು.
ಕಾರ್ಯಕ್ರಮವನ್ನು ಹೆಡ್ ಕಾನ್ಸ್ಟೇಬಲ್ ಮಂಜುನಾಥ ಅಡಿಗ ಅವರು ನಿರೂಪಿಸಿದರು.


ನಮ್ಮ ವರದಿಗಾರರು
wilsಶಿರ್ವ, ಜೂನ್ 9: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ತಡೆಗಟ್ಟುವ ಕುರಿತು ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಶಿರ್ವ ಮಹಿಳಾ ಸೌಧದಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯ ಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ, ಶಿರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ ಮರಬದ ಹಾಗೂ ಕ್ರೈಂ ಎಸ್ಐ ಲೋಹಿತ್ ಕುಮಾರ್ ಉಪಸ್ಥಿತರಿದ್ದರು. ಶಿರ್ವ ಠಾಣಾ ವ್ಯಾಪ್ತಿಯ ಬ್ಯಾಂಕ್ಗಳು, ಜ್ಯುವೆಲ್ಲರಿ ಅಂಗಡಿಗಳು, ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರು, ಧಾರ್ಮಿಕ ಕೇಂದ್ರಗಳು, ಬ್ಯಾಂಕ್ಗಳು ಹಾಗೂ ಜ್ಯುವೆಲ್ಲರಿ ಅಂಗಡಿಗಳಲ್ಲಿ ಗುಣಮಟ್ಟದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ತಿಳಿಸಿದರು. ಎಲ್ಲಾ ಬ್ಯಾಂಕ್ಗಳಲ್ಲಿ ಪ್ಯಾನಿಕ್ ಬಟನ್ ವ್ಯವಸ್ಥೆ ಕಡ್ಡಾಯವಾಗಿರಬೇಕು. ಭದ್ರತಾ ಸಿಬ್ಬಂದಿಯನ್ನು ನೇಮಿಸುವ ಸಂದರ್ಭದಲ್ಲಿ 40 ರಿಂದ 60 ವರ್ಷ ವಯೋಮಿತಿಯೊಳಗಿನ ತರಬೇತಿ ಪಡೆದ ಸಿಬ್ಬಂದಿಯನ್ನು ನೇಮಿಸಿದರೆ ಉತ್ತಮ ಎಂದು ಸಲಹೆ ನೀಡಿದರು.ಸೈಬರ್ ಅಪರಾಧ ಪ್ರಕರಣಗಳಲ್ಲಿ ಬ್ಯಾಂಕ್ ವ್ಯವಸ್ಥಾಪಕರು ಹೆಚ್ಚಿನ ಜಾಗರೂಕತೆ ವಹಿಸಿ, ಅನುಮಾನಾಸ್ಪದ ವ್ಯವಹಾರಗಳ ಬಗ್ಗೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೆ ಅನೇಕ ಅಪರಾಧಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.ಬ್ಯಾಂಕ್ಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ನೈಟ್ ವಿಷನ್ ಸೌಲಭ್ಯ ಹೊಂದಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಕ್ಯಾಮೆರಾಗಳ ಸ್ಟೋರೇಜ್ ಡ್ರೈವ್ಗಳನ್ನು ಸಾರ್ವಜನಿಕರಿಗೆ ಕಾಣದ ರೀತಿಯಲ್ಲಿ ಸುರಕ್ಷಿತವಾಗಿ ಇರಿಸಬೇಕು. ಇದರ ಜೊತೆಗೆ ಸಂಬಂಧಿತ ಅಧಿಕಾರಿಗಳ ಬಳಿ ದಾಖಲೆಗಳ ಬ್ಯಾಕಪ್ ಸಂಗ್ರಹಿಸಿಟ್ಟರೆ ಅಪರಾಧಿಗಳ ಪತ್ತೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.ಕಳ್ಳತನ ನಡೆದ ನಂತರ ಎಚ್ಚೆತ್ತುಕೊಳ್ಳುವುದಕ್ಕಿಂತ ಮುಂಚಿತವಾಗಿಯೇ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯವಾಗಿದೆ. ಅಂಗಡಿಗಳು, ಬ್ಯಾಂಕ್ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಅವರು ಮನವಿ ಮಾಡಿದರು.ಇತ್ತೀಚೆಗೆ ಜಾರಿಗೆ ತರಲಾದ “ಲಾಕ್ಡ್ ಹೌಸ್ ಬೀಟ್ ಸಿಸ್ಟಮ್” ಕುರಿತು ಮಾಹಿತಿ ನೀಡಿದ ಅವರು, ಸಾರ್ವಜನಿಕರು ತಮ್ಮ ಮನೆಗಳಿಗೆ ಬೀಗ ಹಾಕಿ ಹೊರಗಡೆ ಹೋಗುವ ಸಂದರ್ಭದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರೆ, ಬೀಟ್ ಪೊಲೀಸ್ ಸಿಬ್ಬಂದಿ ರಾತ್ರಿ ವೇಳೆ ಎರಡು ಬಾರಿ ನಿಗಾ ವಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಪ್ರತಿಯೊಬ್ಬರೂ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯ ಎಸ್ಐ ಹಾಗೂ ಬೀಟ್ ಪೊಲೀಸ್ ಸಿಬ್ಬಂದಿಯ ದೂರವಾಣಿ ಸಂಖ್ಯೆಯನ್ನು ಹೊಂದಿರಬೇಕು ಎಂದರು.ಸೈಬರ್ ವಂಚಕರಿಂದ ಕರೆಗಳು ಬಂದಲ್ಲಿ ಯಾವುದೇ ಆತುರದ ನಿರ್ಧಾರ ಕೈಗೊಳ್ಳದೆ ಸಂಬಂಧಿತ ಬ್ಯಾಂಕ್ ಅಥವಾ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು. ತುರ್ತು ಸಂದರ್ಭದಲ್ಲಿ 112 ಸಹಾಯವಾಣಿಗೆ ಕರೆ ಮಾಡಿದರೆ ಅತಿ ಕಡಿಮೆ ಸಮಯದಲ್ಲಿ ನೆರವು ಒದಗಿಸುವ ವ್ಯವಸ್ಥೆ ಪೊಲೀಸ್ ಇಲಾಖೆಯಲ್ಲಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಿವೈಎಸ್ಪಿ ಎಸ್. ವಿಜಯ ಪ್ರಸಾದ್ ಅವರು, ಶಿರ್ವ ಪೊಲೀಸ್ ಠಾಣೆಯಲ್ಲಿ ಸಮರ್ಥ ಹಾಗೂ ಕರ್ತವ್ಯನಿಷ್ಠ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಠಾಣಾಧಿಕಾರಿ ಮಂಜುನಾಥ ಮರಬದ ಹಾಗೂ ಕ್ರೈಂ ಎಸ್ಐ ಲೋಹಿತ್ ಕುಮಾರ್ ಅವರ ಸೇವೆಯನ್ನು ಶಿರ್ವ ಪ್ರದೇಶವು ಮುಂದುವರಿಸಿಕೊಂಡು ಹೋಗಬೇಕು ಎಂದು ಅಭಿಪ್ರಾಯಪಟ್ಟರು. ಉಡುಪಿ ಜಿಲ್ಲೆಯಲ್ಲಿಯೇ ಈ ರೀತಿಯ ಜಾಗೃತಿ ಕಾರ್ಯಕ್ರಮವನ್ನು ಪ್ರಥಮ ಬಾರಿಗೆ ಶಿರ್ವದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದ ಸಮಾರೋಪದಲ್ಲಿ ಶಿರ್ವ ಠಾಣೆಯ ಎಸ್ಐ ಮಂಜುನಾಥ ಮರಬದ ಅವರು, ಶಿರ್ವ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಬ್ಯಾಂಕ್ಗಳ ಸಿಎಸ್ಆರ್ ನಿಧಿಯ ಸಹಾಯದಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸಹಕಾರ ನೀಡುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ಅಭಿನಂದಿಸಿ ಧನ್ಯವಾದ ಸಲ್ಲಿಸಿದರು.ಕಾರ್ಯಕ್ರಮವನ್ನು ಹೆಡ್ ಕಾನ್ಸ್ಟೇಬಲ್ ಮಂಜುನಾಥ ಅಡಿಗ ಅವರು ನಿರೂಪಿಸಿದರರು
ನಮ್ಮ ವರದಿಗಾರರು
ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now