
ಉಡುಪಿ : ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯಕ್ಕೆ ಒಳಪಟ್ಟ ಕಥೋಲಿಕ್ ಸಭಾ ಉದ್ಯಾವರ ಘಟಕದ ನೇತೃತ್ವದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿಭಾಗದಲ್ಲಿ ವಿಶೇಷ ಶ್ರೇಣಿಯಲ್ಲಿ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮವನ್ನು ಜೂನ್ 14ರಂದು ಚರ್ಚ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ವಿಭಾಗದಲ್ಲಿ 7 ಮತ್ತು ಪಿಯುಸಿ ವಿಭಾಗದಲ್ಲಿ 8 ಸಾಧಕ ವಿದ್ಯಾರ್ಥಿಗಳು ಸನ್ಮಾನವನ್ನು ಸ್ವೀಕರಿಸಲಿದ್ದಾರೆ. ಕಥೋಲಿಕ್ ಸಭಾ ಉದ್ಯಾವರ ಘಟಕದ ಆಧ್ಯಾತ್ಮಿಕ ನಿರ್ದೇಶಕರಾದ ವo. ಅನಿಲ್ ಡಿಸೋಜಾ, ಸಹಾಯಕ ಧರ್ಮ ಗುರುಗಳಾದ ವo. ಸಂತೋಷ್ ಅಲ್ಮೇಡಾ, ಪಾಲನ ಮಂಡಳಿಯ ಉಪಾಧ್ಯಕ್ಷರಾದ ಮೆಲ್ವಿನ್ ನೊರನ್ನ, ಕಾರ್ಯದರ್ಶಿ ವಿಲ್ಫ್ರೇಡ್ ಡಿಸೋಜಾ, ಆಯೋಗಗಳ ಸಂಯೋಜಿಕಿ ಐರಿನ್ ಪಿರೇರಾ ಮತ್ತಿತರರು ಭಾಗವಹಿಸಲಿದ್ದಾರೆ.
ನಮ್ಮ ವರದಿಗಾರರು
ಸ್ಟೀವನ್ ಕುಲಾಸೊ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now