
ಹಲವು ವರ್ಷಗಳಿಂದ ರಕ್ತದಾನ ಮಾಡುತ್ತಾ, ರಕ್ತದಾನ ಶಿಬಿರ ಆಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಇತ್ತೀಚಿನ ಕೆಲವು ವರ್ಷಗಳಿಂದ ತನ್ನ ಜನ್ಮದಿನದ ಪ್ರಯುಕ್ತ ರಕ್ತದಾನ ಹಾಗೂ ರಕ್ತದಾನಿಗಳನ್ನು ಗುರುತಿಸಿ ಅಭಿನಂದಿಸುವ ಮೂಲಕ ರಕ್ತದಾನಕ್ಕೆ ಪ್ರೇರಣೆ ಮಾಡುತ್ತಾ ಬರುತ್ತಿರುವ ಸಾಮಾಜಿಕ ಕಾರ್ಯಕರ್ತ, ದೇಹದಾನಿ ರಕ್ತದಾನಿ ರಮೇಶ ಕರ್ಕೇರ ಉಗ್ಗೆಲ್ಬೆಟ್ಟು ಇವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಶಾಖಾ ವತಿಯಿಂದ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ ಸಂದರ್ಭದಲ್ಲಿ ನೀಡುವ ಗೌರವ ಸನ್ಮಾನಕ್ಕೆ ಪಾತ್ರರಾಗಿದ್ದಾರೆ. ರಾಜಕೀಯ, ಸಾಮಾಜಿಕ, ಧಾರ್ಮಿಕ, ಸಹಕಾರ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ರಮೇಶ ಕರ್ಕೇರ ಈ ಗೌರವಕ್ಕೆ ಸಂಸ್ಥೆಗೆ ಧನ್ಯವಾದ ಸಲ್ಲಿಸುತ್ತಾ ಇದು ಇನ್ನಷ್ಟು ನೇವೆ ಮಾಡಲು ಪ್ರೇರಣೆಯಾಲಿದೆ ಎಂದಿದ್ದಾರೆ



Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now