ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಜನ್ಮದಿನಾಚರಣೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಜನ್ಮದಿನಾಚರಣೆ.
0Shares

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರಮವು ಜೂನ್ 19 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿಯ ಕಾಂಗ್ರೆಸ್ ಭವನದಲ್ಲಿ ಜರುಗಲಿದೆ.

ನಿರಂತರ ಜನರ ನೋವಿಗೆ ಸ್ಪಂದಿಸುವ, ಸಾಮಾಜಿಕ ನ್ಯಾಯದ ಪರ ಹೋರಾಡುವ, ಮಾನವೀಯ ಹೃದಯದ ನಾಯಕ ರಾಹುಲ್ ಗಾಂಧಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ 75 ಮಂದಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳಾದ ಶ್ರವಣ ಸಾಧನ, ಕಂಬೋಡ್ ವೀಲ್ ಚೇರ್, ವಾಟರ್ ಬೆಡ್, ವಾಕರ್, ವಾಕಿಂಗ್ ಸ್ಟಿಕ್, ಕ್ರಚ್ಸ್ ಹಾಗೂ ಪೌಷ್ಟಿಕ ಆಹಾರ ಕಿಟ್ ಗಳನ್ನು ನೀಡಲಾಗುವುದೆಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now