ಜೂನ್ 26 : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ನೂತನ ಪದಾಧಿಕಾರಿಗಳ ಪದಗ್ರಹಣ

ಜೂನ್ 26 : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ನೂತನ ಪದಾಧಿಕಾರಿಗಳ ಪದಗ್ರಹಣ
0Shares

ಉದ್ಯಾವರ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ
2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಜೂನ್ 26 ಶುಕ್ರವಾರ ಸಂಜೆ 6.30ಕ್ಕೆ ಉಡುಪಿ ಅಜ್ಜರಕಾಡಿನಲ್ಲಿರುವ ಟೌನ್ ಹಾಲ್ ನಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ನೂತನ ಅಧ್ಯಕ್ಷರಾಗಿ ಲ. ರೋಯ್ಸ್ ಫೆರ್ನಾಂಡಿಸ್, ಕಾರ್ಯದರ್ಶಿ ಲ. ಜೋನ್ ಗೋಮ್ಸ್, ಕೋಶಾಧಿಕಾರಿ ಲ. ವಿಲ್ಫ್ರೆಡ್ ಡಿಸೋಜಾ ನೇತೃತ್ವದ ಕಾರ್ಯಕಾರಿ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾ ಪ್ರಥಮ ಉಪ ಗವರ್ನರ್ ಪಿಎಂಜೆಎಫ್ ಲಯನ್ ಹರಿಪ್ರಸಾದ್ ರೈ ಪದಗ್ರಹಣ ಅಧಿಕಾರಿಯಾಗಿ ಆಗಮಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಫೆರ್ನಾಂಡಿಸ್ ಗ್ರೂಪ್ ನ ಪ್ರವರ್ತಕ, ಪಿಎಂಜೆಎಫ್ ಲಯನ್ ವಿಲ್ಸನ್ ಫೆರ್ನಾಂಡಿಸ್, ಯುವ ಉದ್ಯಮಿ ಮೊಹಮದ್ ಸಾಧಿಕ್, ಪ್ರಾಂತ್ಯ 4ರ ಪ್ರಾಂತ್ಯ ಅಧ್ಯಕ್ಷ ಲಯನ್ ದಿವಾಕರ್ ಸುನಿಲ್, ವಲಯ 3ರ ವಲಯ ಅಧ್ಯಕ್ಷ ಲಯನ್ ಪ್ರಕಾಶ್ ಪೂಜಾರಿ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಹಸ್ತಾಂತರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ.

*ನಮ್ಮ ವರದಿಗಾರರು*

ಸ್ಟೀವನ್ ಕುಲಾಸೊ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now