ಬಿರುಸುಗೊಂಡ ಮಳೆ : ಜೂನ್ 30 ರಿಂದ ಜುಲೈ 6 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಬಿರುಸುಗೊಂಡ ಮಳೆ : ಜೂನ್ 30 ರಿಂದ ಜುಲೈ 6 ರವರೆಗೆ ಆರೆಂಜ್ ಅಲರ್ಟ್ ಘೋಷಣೆ
0Shares

ಉಡುಪಿ: ಜಿಲ್ಲೆಯಲ್ಲಿ ಮಳೆ ಬಿರುಸಿಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 1 ವಾರ ಅಂದರೆ ಜೂನ್ 30 ರಿಂದ ಜುಲೈ 6 ರ ವರೆಗೆ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಯೆಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ.

ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆ, ಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರಬೇಕು ಮತ್ತು ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯಬಾರದು.

ನಮ್ಮ ವರದಿಗಾರರು

ಸ್ಟೀವನ್ ಕುಲಾಸೊ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now