ಜುಲೈ 2 ಮತ್ತು 3 ರಂದು ಭಾರಿ ಮಳೆ ಮುನ್ಸೂಚನೆ – ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

ಜುಲೈ 2 ಮತ್ತು 3 ರಂದು ಭಾರಿ ಮಳೆ ಮುನ್ಸೂಚನೆ – ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
0Shares

ಉಡುಪಿ, ಜು. 1: ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಜುಲೈ 2 ಮತ್ತು 3ರಂದು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಈ ಅವಧಿಯಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ನದಿಗಳು, ಹೊಳೆಗಳು ಮತ್ತು ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಗುಡ್ಡ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಂತಹ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು.

ನಮ್ಮ ವರದಿಗಾರರು

ಸ್ಟೀವನ್ ಕುಲಾಸೊ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now