
ಕಾರ್ಕಳ : ಕ್ರೈಸ್ಟ್ಕಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ
ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಜು.2ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ರೆ.ಫಾ ಕ್ಯಾನುಟ್ ಬರ್ಬೋಜ ಅವರು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪಠ್ಯದ ಜೊತೆಗೆ ಪಠ್ಯತರ ಚಟುವಟಿಕೆಗಳಿಗೆ ಕೂಡ ಮಹತ್ವ ನೀಡಿದಾಗ ಮಾತ್ರ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಾಗಲು ಸಾಧ್ಯ ಈ ನಿಟ್ಟಿನಲ್ಲಿ ಕ್ರೈಸ್ಟ್ಕಿಂಗ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೊಂದಿಗೆ ಕೌಶಲ್ಯ ಪ್ರದರ್ಶನಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವುದು ಅಭಿನಂದನಾರ್ಹ ಎಂದರು.
ಕಾರ್ಕಳ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸೆಕ್ಟರ್ ಶೇಖರ್ ನಾಯ್ಕ ಮಾತನಾಡಿ, ಹೆತ್ತವರು ಮತ್ತು ಗುರು, ಹಿರಿಯರಿಗೆ ಗೌರವಿಸುವುದರೊಂದಿಗೆ ಉತ್ತಮ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸತ್ಪಜೆಗಳಾಗಿ ಬಾಳಿ ಎಂದು ಹೇಳಿದರು.
ರೊಟೇರಿಯನ್ ಡಾ. ಭರತೇಶ್ ಎ. ಮಾತನಾಡಿ, ಉತ್ತಮ ನಡತೆ, ಸಂಸ್ಕಾರ, ವಿನಯತೆ, ಶಿಸ್ತು ಇದ್ದಾಗ ಮಾತ್ರ ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸಲು ಸಾಧ್ಯ ಇಂತಹ ಉತ್ತಮ ಮೌಲ್ಯಗಳ ಜೊತೆಗೆ ಮಕ್ಕಳಿಗೆ ಬಾಲ್ಯದಲ್ಲಿಯೇ ಜೀವನ ಪಾಠವನ್ನು ಈ ವಿದ್ಯಾಸಂಸ್ಥೆ ನೀಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಇದನ್ನು ನೀವು ನಿಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ನಿಮ್ಮ ಬದುಕು ಉಜ್ವಲವಾಗಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಕಳ ರೋಟರಿ ಕ್ಲಬ್, ರಾಕ್ ಸಿಟಿಯ ಅಧ್ಯಕ್ಷ ಎಚ್. ಮಂಜುನಾಥ್ ಹೆಗ್ಡೆ ಮಾತನಾಡಿ, ಸಂಸ್ಥೆಯಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ನಾಯಕತ್ವ ಗುಣ ಮೈಗೂಡಿಸಿಕೊಳ್ಳುವುದರೊಂದಿಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟಕಿಂಗ್ ಎಜ್ಯುಕೇಶನ್ ಟ್ರಸ್ಟ್ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಅಗಾಧವಾದ ಬುದ್ಧಿವಂತಿಕೆಯಿದೆ. ಈ ಬುದ್ಧಿವಂತಿಕೆಯನ್ನು ನೀವು ಉತ್ತಮ ಕೆಲಸಗಳಿಗೆ ಉಪಯೋಗಿಸಿಕೊಂಡು ನಿಮ್ಮಶಾಲೆ, ಹೆತ್ತವರು ಹಾಗೂ ಸಮಾಜಕ್ಕೆ ಹೆಸರು ತರುವ ವ್ಯಕ್ತಿಗಳಾಗಿ ಎಂದು ಹೇಳಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now