
ಬೆಂಗಳೂರು: ಶಾಲಾ ಬಸ್‌ಗಳಲ್ಲಿ ಪ್ರಯಾಣಿಸುವ ಮಕ್ಕಳ
ಸುರಕ್ಷತೆ ಮತ್ತು ರಕ್ಷಣೆಯ ಜವಾಬ್ದಾರಿ ಆಯಾ ಶಾಲಾ ಆಡಳಿತ ಮಂಡಳಿಗಳದ್ದೇ ಆಗಿರಲಿದೆ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ.
ಶಾಲಾ ಆವರಣದಲ್ಲಷ್ಟೇ ಅಲ್ಲ, ಮಗು ಬಸ್ ಹತ್ತಿದಾಗಿನಿಂದ ಸುರಕ್ಷಿತವಾಗಿ ಪೋಷಕರಲ್ಲಿ ಸೇರುವ ತನಕ ಮಗುವಿನ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರಲಿದೆ ಎಂದು ಹೇಳಿರುವ ಹೈಕೋರ್ಟ್, ಶಾಲಾ ಬಸ್ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದಕೊಂಡ ಪ್ರಕರಣ ಸಂಬಂಧ ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.
ಶಾಲಾ ಬಸ್‌ನಲ್ಲಿ 2025ರ ಆಗಸ್ಟ್ 1ರಂದು ನಡೆದ ಅಪಘಾತದಲ್ಲಿ 4ನೇ ತರಗತಿಯ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಘಟನೆ ಸಂಬಂಧ ದಾಖಲಾಗಿದ್ದ ಪ್ರಕರಣ ರದ್ದುಕೋರಿ ಮಂಡ್ಯ ಜಿಲ್ಲೆಯ ಮದ್ದೂರಿನ ದಿವ್ಯಜ್ಯೋತಿ ಶಾಲಾ ಆಡಳಿತ ಮಂಡಳಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದ್ದು, ಪ್ರಕರಣ ರದ್ದು ಕೋರಿ ಶಾಲಾ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now