
ನವದೆಹಲಿ: ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ
ಗಣನೀಯವಾಗಿ ಇಳಿದಿದ್ದರೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇನ್ನೂ 2-3 ತಿಂಗಳು ಇಳಿಕೆಯಾಗದು ಎಂಬ ಸುಳಿವನ್ನು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ನೀಡಿದ್ದಾರೆ. ಅಲ್ಲದೇ, ಯುದ್ಧದಿಂದಾಗಿ ದೇಶದ ತೈಲ ಕಂಪನಿಗಳಿಗೆ 74,781 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಗುರುವಾರ ದಿಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯವಾಗಿ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನ ಉತ್ಪಾದನೆಗೆ ಅಗತ್ಯವಿರುವ ಕಚ್ಚಾ ತೈಲವನ್ನು ಕನಿಷ್ಠ ಎರಡು ತಿಂಗಳ ಮುಂಚಿತವಾಗಿಯೇ ಖರೀದಿಸುತ್ತವೆ. ಹೀಗಾಗಿ, ಪ್ರಸ್ತುತ ಸಂಸ್ಕರಣೆಯಾಗುತ್ತಿರುವ ಕಚ್ಚಾ ತೈಲವನ್ನು ಏಪ್ರಿಲ್ ಅಥವಾ ಮೇ ಮೊದಲ ವಾರಗಳಲ್ಲಿ ಅಂತರರಾಷ್ಟ್ರೀಯ ಬೆಲೆ ಗರಿಷ್ಠ ಮಟ್ಟದಲ್ಲಿದ್ದಾಗ ಖರೀದಿಸಲಾಗಿತ್ತು. ಹಾಗಾಗಿ, ಅದೇ ದರದಲ್ಲಿ ಮಾರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ವಿವರಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now