ಮಂಗಳೂರು: ಕಂಟೈನರ್ ಲಾರಿ ಡಿಕ್ಕಿ; ಎಲೆಕ್ಟ್ರಿಕ್ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಕಂಟೈನರ್ ಲಾರಿ

ಮಂಗಳೂರು: ಕಂಟೈನರ್ ಲಾರಿ ಡಿಕ್ಕಿ; ಎಲೆಕ್ಟ್ರಿಕ್ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಕಂಟೈನರ್ ಲಾರಿ
0Shares

ಮಂಗಳೂರು, ಜು.03: ರಾಷ್ಟ್ರೀಯ ಹೆದ್ದಾರಿ-66ರ ಮಂಗಳೂರು-ಉಡುಪಿ ರಸ್ತೆಯ ಕೂಳೂರು ವಿ.ಆರ್.ಎಲ್ ಕಚೇರಿ ಎದುರು ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಸವಾರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸದಾನಂದ ಶೆಟ್ಟಿಗಾರ್ (46) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, KA19HT 5288 ನೋಂದಣಿ ಸಂಖ್ಯೆಯ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಸದಾನಂದ ಶೆಟ್ಟಿಗಾರ್ ಅವರು ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ, ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ KA19AE0785 ನೋಂದಣಿ ಸಂಖ್ಯೆಯ ಕಂಟೈನರ್ ಲಾರಿಯ ಚಾಲಕ ಮಹಮ್ಮದ್ ಅಜರುದ್ದೀನ್ ಅವರು ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ವಾಹನ ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಡಿಕ್ಕಿಯ ಪರಿಣಾಮ ಸ್ಕೂಟರ್ ಸವಾರರು ರಸ್ತೆಗೆ ಬಿದ್ದು, ಲಾರಿಯ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಂಚಾರಕ್ಕೂ ಅಡಚಣೆ ಉಂಟಾಯಿತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now