ಶಾಲೆಗಳಲ್ಲಿ ಮಕ್ಕಳಿಗೆ ಹೊಡೆಯುವಂತಿಲ್ಲ: ಹೈಕೋರ್ಟ್‌ ಮತ್ತೆ ತಾಕೀತು

ಶಾಲೆಗಳಲ್ಲಿ ಮಕ್ಕಳಿಗೆ ಹೊಡೆಯುವಂತಿಲ್ಲ: ಹೈಕೋರ್ಟ್‌ ಮತ್ತೆ ತಾಕೀತು
0Shares

ಬೆಂಗಳೂರು: ಶಾಲೆಗಳಲ್ಲಿ ‘ಛಡಿಯೇಟು ಶಿಕ್ಷೆ’ಗೆ ಆಕ್ಷೇಪ

ವ್ಯಕ್ತಪಡಿಸಿರುವ ಹೈಕೋರ್ಟ್, ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ ಎಂದು ಕಟುವಾಗಿ ಹೇಳಿದೆ.

ಅಲ್ಲದೆ, ದಕ್ಷಿಣ ಜಿಲ್ಲೆಯ ಸುರತ್ಕಲ್‌ನ ಖಾಸಗಿ ಶಾಲೆಯೊಂದರಲ್ಲಿ ಯುಕೆಜಿ ಓದುತ್ತಿರುವ 6 ವರ್ಷದ ಮಗುವಿಗೆ ಕೋಲಿನಿಂದ ಹೊಡೆದ ಆರೋಪ ಎದುರಿಸುತ್ತಿರುವ ಅದೇ ಶಾಲೆಯ ಶಿಕ್ಷಕಿ ಮೇಲಿನ ಪ್ರಕರಣದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಮಗುವಿಗೆ ಹೊಡೆದ ಪ್ರಕರಣ ಸಂಬಂಧ ಮಂಗಳೂರಿನಲ್ಲಿರುವ 2ನೇ ಜೆಎಂಎಫ್‌ಸಿ ಕೋರ್ಟ್ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಕ್ರಾಸ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಶಿಕ್ಷಕಿ ಮಗುವಿಗೆ ಯಾಕೆ ಹೊಡೆದರು ಎಂದು ಪ್ರಶ್ನಿಸಿತು. ಅದಕ್ಕೆ ನಾವಲ್ಲ ಎಂದು ಶಿಕ್ಷಕಿ ಪರ ವಕೀಲರು ಸಮಜಾಯಿಷಿ ನೀಡಿದರು. ಇದರಿಂದ ಕೋಪಗೊಂಡ ನ್ಯಾಯಮೂರ್ತಿಗಳು, ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ. ಇಂತಹ ನಡೆಯನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ಕಟುವಾಗಿ ಹೇಳಿತು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now