ಉಡುಪಿ: ಶಾಲಾ ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡುವ ಉದ್ದೇಶದಿಂದ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಮಂಗಳವಾರ ಜಿಲ್ಲೆಯಾದ್ಯಂತ ಶಾಲಾ ವಾಹನಗಳ ವಿಶೇಷ ತಪಾಸಣಾ (Special Drive) ಕಾರ್ಯಾಚರಣೆ ನಡೆಸಲಾಯಿತು.

ಸಾರ್ವಜನಿಕರಿಂದ ಬಂದ ಅಹವಾಲುಗಳು ಹಾಗೂ ಜುಲೈ 4ರಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ನೀಡಿದ ಸೂಚನೆಯ ಹಿನ್ನೆಲೆಯಲ್ಲಿ ಈ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶಾಲಾ ಬಸ್ಗಳು, ವ್ಯಾನ್ಗಳು, ಆಟೋರಿಕ್ಷಾಗಳು ಸೇರಿದಂತೆ ಶಾಲಾ ಮಕ್ಕಳನ್ನು ಶಾಲೆಗೆ ಕರೆತರುವ ಹಾಗೂ ಮನೆಗೆ ಕರೆದೊಯ್ಯುವ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಯಿತು.
ತಪಾಸಣೆ ವೇಳೆ ವಾಹನಗಳ ದಾಖಲೆಗಳು, ಫಿಟ್ನೆಸ್ ಪ್ರಮಾಣಪತ್ರ, ವಿಮೆ, ಚಾಲನಾ ಪರವಾನಗಿ, ಶಾಲಾ ವಾಹನಗಳಿಗೆ ಕಡ್ಡಾಯವಾಗಿರುವ ಸುರಕ್ಷತಾ ಮಾನದಂಡಗಳು, ಅಗ್ನಿಶಾಮಕ ಉಪಕರಣ, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ತುರ್ತು ನಿರ್ಗಮನ ವ್ಯವಸ್ಥೆ ಹಾಗೂ ನಿಗದಿತ ಸಂಖ್ಯೆಗೆ ಮೀರಿದ ಮಕ್ಕಳನ್ನು ಸಾಗಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲಾಯಿತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now