
ಪುತ್ತೂರು: ಕಾಂಗ್ರೆಸ್ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಜು.8 ರಂದು ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ತಾಲೂಕು ಕಚೇರಿಗೆ ಕೆಲಸದ ನಿಮಿತ್ತ ಆಗಮಿಸಿದ್ದ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಿರಂಜನ ರೈ ಅವರು ಕೋಡಿಂಬಾಡಿ ಮಹಿಷಮರ್ಧಿನಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಕಂಬಳ ಸ್ಪರ್ಧೆಗಳಲ್ಲಿ ವೀಕ್ಷಕ ವಿವರಣೆಗಾರರಾಗಿ ಗುರುತಿಸಿಕೊಂಡಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now