
ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯ 5 ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ “ಸಹಕಾರದಿಂದ ಸಮೃದ್ಧಿ” ಎಂಬ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಪ್ತಾಹ ಆಚರಣೆ : 2026 ಕಾರ್ಯಕ್ರಮವನ್ನು ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸಾೈಟಿ ಲಿ., ಕಿನ್ನಿಮುಲ್ಕಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಸಹಕಾರ ಇಲಾಖೆ, ಉಡುಪಿ ಜಿಲ್ಲಾ ಪೆÇಲೀಸ್ ಮತ್ತು ಹಿರಿಯಡ್ಕ ಪೆÇಲೀಸ್ ಠಾಣೆ ಇವರ ಸಹಯೋಗದೊಂದಿಗೆ “ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ”ವನ್ನು ಹಿರಿಯಡ್ಕ ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸಾೈಟಿ ಲಿ., ಕಿನ್ನಿಮುಲ್ಕಿ ಇದರ ಅಧ್ಯಕ್ಷರಾದ ಶ್ರೀ ಅರುಣ ಕುಮಾರ್ ಶೆಟ್ಟಿ ವಹಿಸಿದ್ದರು.
ಹಿರಿಯಡ್ಕ ಪೊಲೀಸ್ಠಾ ಣೆಯ ಪೊಲೀಸ್ಉಪನಿರೀಕ್ಷಕರಾದ ಶ್ರೀ ಪುನೀತ್ ಕುಮಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾದಕ ದ್ರವ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ , ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ (ಅಧ್ಯಕ್ಷರು – ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ಉಡುಪಿ , ನಿರ್ದೇಶಕರು- ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.,, ಬೆಂಗಳೂರು, ಅಧ್ಯಕ್ಷರು -ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸಾೈಟಿ ಲಿ.,ಉಡುಪಿ) , ಶ್ರೀಮತಿ ಲಾವಣ್ಯ ಕೆ. ಆರ್. (ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು, ಉಡುಪಿ ಜಿಲ್ಲೆ ) ಶ್ರೀಮತಿ ಕ್ಲಾರಿನಾ ನಿಕೋಲಸ್ ( ಪ್ರಾಂಶುಪಾಲರು – ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ಹಿರಿಯಡ್ಕ) ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಪವನ್ ಕುಮಾರ್ ( ಸೈಬರ್ ಕ್ರೈಂ, ಉಡುಪಿ ) ಇವರು ಶಾಲಾ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಮತ್ತು ಸೈಬರ್ ಕ್ರೈಂ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸಾೈಟಿ ಲಿ., ನ ಮುಖ್ಯ ಕಾರ್ಯನಿರ್ವಣಾಧಿಕಾರಿ ಶ್ರೀ ರಾಜೇಶ್ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ನ ಮುಖ್ಯ ಕಾರ್ಯನಿರ್ವಣಾಧಿಕಾರಿ ಶ್ರೀಮತಿ ಅನುಷಾ ಕೋಟ್ಯಾನ್, ಶಾಲೆಯ ಆಡಳಿತ ವರ್ಗ, ಶಿಕ್ಷಕ ವೃಂದ, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now