
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಸಿದ್ಧತೆಗಳು
ಆರಂಭವಾಗಿದೆ. 2026ರ ಅಕ್ಟೋಬರ್ ನಲ್ಲಿ ನಡೆಯಲಿರುವ ಮೈಸೂರು ದಸರಾ ಕಾರ್ಯಕ್ರಮದ ಉದ್ಘಾಟನೆಯವನ್ನು ಘೋಷಿಸಲಾಗಿದೆ.
ಅಕ್ಟೋಬರ್ 11 ಬೆಳಗ್ಗೆ 11.50ಕ್ಕೆ ಶುಭ ಧನುರ್ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ 2026 ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 21ರ ಸಂಜೆ 4.10ರಿಂದ 4.35ರ ಸಮಯದಲ್ಲಿ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ನಡೆಯಲಿದ್ದು, ಜಂಬೂ ಸವಾರಿ ಆರಂಭವಾಗಲಿದೆ.
ಮೈಸೂರು ದಸರಾದ ಜಂಬೂ ಸವಾರಿಗಾಗಿ ಆಗಸ್ಟ್ ಕೊನೆಯ ವಾರದಲ್ಲಿ ಆನೆಗಳು ಅರಮನೆ ನಗರಿಗೆ ಬರಲಿದೆ. ಆಗಸ್ಟ್ 26ರಂದು ಅರಮನೆ ಪ್ರವೇಶ ದ್ವಾರದಲ್ಲಿ ಗಜಪಡೆಗೆ ಪೂಜೆ ನಡೆಯಲಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now