ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಬಂಧನ

ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಬಂಧನ
0Shares

ಮಂಗಳೂರು, ಜು. 10: ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಪೊಲೀಸ್‌ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಭಾರತ ಪ್ರವೇಶಿಸಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪತ್ತೆಹಚ್ಚಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಜುಲೈ 9ರಂದು ಮುಕ್ಕ ಸಮೀಪದ ನಿರ್ಮಾಣ ಹಂತದ ಕಟ್ಟಡದ ಮೇಲೆ ಸುರತ್ಕಲ್ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಒಟ್ಟು 54 ಮಂದಿ ಕಟ್ಟಡ ಕಾರ್ಮಿಕರ ದಾಖಲೆಗಳನ್ನು ಪರಿಶೀಲಿಸಲಾಯಿತು.

ಪರಿಶೀಲನೆ ವೇಳೆ ಬಾಂಗ್ಲಾದೇಶದ 8 ಮಂದಿ ಪ್ರಜೆಗಳು ಅಕ್ರಮವಾಗಿ ವಾಸ್ತವ್ಯ ಹೂಡಿ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತರು ಸುಮಾರು ಮೂರು ತಿಂಗಳ ಹಿಂದೆ ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮಾರ್ಗವಾಗಿ ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು. ಬಳಿಕ ಮುರ್ಷಿದಾಬಾದ್ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳ ಬಣ್ಣದ ಜೆರಾಕ್ಸ್‌ ಪ್ರತಿಗಳ ಮೇಲೆ ತಮ್ಮ ಭಾವಚಿತ್ರ ಅಂಟಿಸಿ ಗುರುತಿನ ದಾಖಲೆಗಳಂತೆ ಬಳಸಿಕೊಂಡು ಕಳೆದ ಎರಡು ತಿಂಗಳಿನಿಂದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now