ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..

ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..
0Shares

ವಿಟ್ಲ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಜು.11ರಂದು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲ್ಲೂಕಿನ ಬೋಲಂತೂರು ದಂಡೆರ್ಮಾ ನಿವಾಸಿ ಅಬ್ದುನ್ನಸಿರ್ (ನಾಸಿರ್ ದಂಡೇಮರ್) ಎಂದು ಗುರುತಿಸಲಾಗಿದೆ.

ಜು.4 ರಂದು ನಾಸಿರ್‌ರವರು ಸಂಚರಿಸುತ್ತಿದ್ದ ದ್ವಿಚಕ್ರವಾಹನ ಹಾಗೂ ಆಟೋ ರಿಕ್ಷಾದ ಈ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ನಾಸಿ‌ರ್ ಅವರ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now