
ಮಣಿಪಾಲ: ಉಡುಪಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದ ಕೆಲವೆಡೆ ಈ ವರ್ಷ ಡಿಸೆಂಬರ್ ಗೂ ಮೊದಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.
ಆದ್ದರಿಂದ ಈಗಲೇ ಜಾಗ್ರತೆ ವಹಿಸಲು ಮುಂದಾಗಿರುವ ಜಿಲ್ಲಾಡಳಿತ ಖಾಸಗಿ ಬೋರ್ವೆಲ್, ಬಾವಿ, ಟ್ಯಾಂಕರ್ಗಳನ್ನು ಗುರುತಿಸಲು ನಿರ್ಧರಿಸಿದೆ.
ಈ ಮೂಲಕ ಅಗತ್ಯವಿದ್ದಲ್ಲಿ ಕುಡಿಯುವ ನೀರನ್ನು ಸರಬರಾಜು ಮಾಡಲು ಬಳಸಿಕೊಳ್ಳುವಂತೆ ಮಾಡುವ ಮೂಲಕ ಸಮಸ್ಯೆಯನ್ನು ನಿರ್ವಹಿಸುವುದಾಗಿ ಬುಧವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿ.ಪಂ.
ಸಿಇಒ ಪ್ರತೀಕ್ ಬಾಯಲ್ ಹೇಳಿದರು.
ಜಿಲ್ಲೆಯ 94 ಗ್ರಾಮ ಪಂಚಾಯತ್ಗಳ 146 ಗ್ರಾಮಗಳಲ್ಲಿ ನೀರಿನ ಕೊರತೆ ಎದುರಾಗುವ ಸಂಭವವಿದೆ. ಕಾರ್ಕಳ ತಾಲೂಕಿನ 17 ಗ್ರಾ.ಪಂ.ಗಳ 21 ಗ್ರಾಮ, ಕುಂದಾಪುರ ತಾಲೂಕಿನ 36 ಗ್ರಾ.ಪಂ.ಗಳ 57 ಗ್ರಾಮ, ಉಡುಪಿ ತಾಲೂಕಿನ 4 ಗ್ರಾ.ಪಂ.ಗಳ 6 ಗ್ರಾಮ, ಬೈಂದೂರು ತಾಲೂಕಿನ 15 ಗ್ರಾ.ಪಂ.ಗಳ 22 ಗ್ರಾಮ, ಬ್ರಹ್ಮಾವರ ತಾಲೂಕಿನ 13 ಗ್ರಾ.ಪಂ.ಗಳ 25 ಗ್ರಾಮ, ಕಾಪು ತಾಲೂಕಿನ 4 ಗ್ರಾ.ಪಂ.ಗಳ 5 ಗ್ರಾಮ ಹಾಗೂ ಹೆಬ್ರಿ ತಾಲೂಕಿನ 5 ಗ್ರಾ.ಪಂ.ಗಳ 10 ಗ್ರಾಮಗಳು ಈ ಪಟ್ಟಿಯಲ್ಲಿ ಸೇರಿವೆ. ಇಲ್ಲಿಯ ಜನರ ಬೇಡಿಕೆಗೆ ಅನುಗುಣವಾಗಿ ಪರ್ಯಾಯ ಮೂಲಗಳಿಂದ ಕುಡಿಯುವ ನೀರಿನ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಜಿಲ್ಲೆಯ ಯಾವುದೇ ಭಾಗದಲ್ಲೂ ಕುಡಿಯುವ ನೀರಿನ ಪೂರೈಕೆಯಲ್ಲಿ ಅಭಾವ ಉಂಟಾಗಬಾರದು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now