
ಮಂಗಳೂರು, ಜು. 16: “ಡ್ರಗ್ಸ್ ಫ್ರೀ ಮಂಗಳೂರು” ಅಭಿಯಾನದಡಿ ಮಂಗಳೂರು ನಗರ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ₹5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡು, ಬೆಳ್ತಂಗಡಿ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕಾರ್ಯಾಚರಣೆಯು ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕ ವಸ್ತು ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿದೆ. ಜೂನ್ 25, 2026ರಂದು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು, ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನನ್ನು ಬಂಧಿಸಿ, ಆತನಿಂದ ₹1.50 ಲಕ್ಷ ಮೌಲ್ಯದ 15.17 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು.
ಈ ಪ್ರಕರಣದ ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು, ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಸಾಗಿಸುತ್ತಿದ್ದ ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಪಡೆದರು. ಅದರಂತೆ ಜುಲೈ 15ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಮೇಲೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now