
ಬೆಂಗಳೂರು: ಪರಿಷತ್ ಸದಸ್ಯತ್ವ ರದ್ದತಿಯನ್ನು ಪ್ರಶ್ನಿಸಿ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಅವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ. ಈ ಸಂಬಂಧ ಎಂಕೆ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಅವರಿಗೆ ಮೇಲುಗೈ ಸಾಧಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದೆ. ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕೆ 2021ರ ಡಿಸೆಂಬರ್ ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ನಿಂದ ಗಾಯತ್ರಿ ಶಾಂತೇಗೌಡ ಸ್ಪರ್ಧಿಸಿದ್ದರು.
ಚುನಾವಣೆಯಲ್ಲಿ ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧುವಾಗಿದ್ದವು. 1,188 ಮತಗಳನ್ನು ಪಡೆದಿದ್ದ ಪ್ರಾಣೇಶ್ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಗಾಯತ್ರಿ ಶಾಂತೇಗೌಡ 1,182 ಮತಗಳನ್ನ ಗಳಿಸಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now