
ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ಆರ್ಭಟ ಜೋರಾಗಿ ಇರಲಿದೆ. ಜುಲೈ 17 ರಿಂದ 22ರವರೆಗೆ ಬಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಕುರಿತು ಐಎಂಡಿ ಮುನ್ಸೂಚನೆ ನೀಡಿದೆ.
ಉಡುಪಿ/ ಮಂಗಳೂರು : ಮುಂಗಾರು ಮಳೆ ಇಲ್ಲದೇ ತತ್ತರಿಸಿದ್ದ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆ ಇದೀಗ ಮುನ್ಸೂಚನೆಯನ್ನು ನೀಡಿದೆ. ಕಳೆದ ಕೆಲವು ದಿನಗಳಿಂದಲೂ ಮಳೆ ಬಿಡುವು ಪಡೆದಿತ್ತು. ಆದರೆ ಮುಂದಿನ 5 ದಿನಗಳ ಕಾಲ ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ಆರ್ಭಟ ಜೋರಾಗಿ ಇರಲಿದೆ. ಜುಲೈ 17 ರಿಂದ 22ರವರೆಗೆ ಬಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಕುರಿತು ಐಎಂಡಿ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಜುಲೈ 19ರಂದು ಬಿರುಗಾಳಿ ಸಹಿತ ಮಳೆಯಾಗಲಿದೆ. ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಮಳೆಯಾಗಲಿದೆ. ಜುಲೈ ತಿಂಗಳಿನಾದ್ಯಂತ ತಂಪಾದ ವಾತಾವರಣ ಇರಲಿದ್ದು, ತಾಪಮಾನವು 23 ಡಿಗ್ರಿ ಸೆಲ್ಸಿಯಸ್‌ನಿಂದ 25 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದ್ದು, ಆಗಾಗ ತುಂತುರು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಮೈಸೂರು, ಕೊಡಗು, ಮಂಡ್ಯ, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಜುಲೈ ತಿಂಗಳಿನಲ್ಲಿ ಮಳೆಯ ಕೊರತೆ ಉಂಟಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now