ಬಿಸಿ ರೋಡ್ : ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ, ಆರೋಪಿ ಚೇತನ್ ಪೊಲೀಸ್ ವಶಕ್ಕೆ

ಬಿಸಿ ರೋಡ್ : ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ, ಆರೋಪಿ ಚೇತನ್ ಪೊಲೀಸ್ ವಶಕ್ಕೆ
0Shares

ಬಂಟ್ವಾಳದ ಬಿಸಿರೋಡ್‌ನಲ್ಲಿ ನಿನ್ನೆ ( ಗುರುವಾರ ) ನಡೆದ ಯುವತಿಯ ಭೀಕರ ಹತ್ಯೆ ಪ್ರಕರಣ ಕರಾವಳಿ ಭಾಗವನ್ನು ಬೆಚ್ಚಿಬೀಳಿಸಿದೆ. ಲಾವಣ್ಯ ಎಂಬ ಯುವತಿಯನ್ನು ಚೇತನ್ ಎಂಬ ಯುವಕ ನಡುರೋಡಲ್ಲಿ ಕೊಚ್ಚಿ ಕೊಂದಿದ್ದು, ಆ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗಿ ಆತಂಕ ಹುಟ್ಟುಹಾಕಿತ್ತು. ಇದೀಗ ಈ ಪ್ರಕರಣದ ಆರೋಪಿ ಚೇತನ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹತ್ಯೆ ಮಾಡಿ ಓಡಿ ಹೋಗಿದ್ದ ಚೇತನ್ ಅರೆಸ್ಟ್ ಆಗಿದ್ದಾನೆ. ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈತ ದೂರದ ಸಂಬಂಧಿಯಾಗಿದ್ದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.ಆದರೆ ಯುವತಿ ಪ್ರೀತಿಗೆ ನಿರಾಕರಿಸಿದ್ದಳು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹರಾಶೆಗೊಂಡಿದ್ದ ಭಗ್ನಪ್ರೇಮಿ ಹಾಡಹಗಲೇ ಯುವತಿಯನ್ನು ಬೆನ್ನಟ್ಟಿ ತಲವಾರಿನಲ್ಲಿ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now