ಮಂಗಳೂರು: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ಹೆಚ್ಚುವರಿ ನುಗ್ಗಾಟವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ-ಮಂಗಳೂರು ಜಂಕ್ಷನ್ಯ-ಯಶವಂತಪುರ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದ್ದು ಅಕ್ಟೋಬರ್ 30 ಮತ್ತು 31ರಂದು ಈ ರೈಲುಗಳು ಸಂಚರಿಸಲಿವೆ.
ನಂಬರ್ 06565 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ರೈಲು ಅಕ್ಟೋಬರ್ 30 ರಿಂದ ರಾತ್ರಿ 11:50ಕ್ಕೆ ಯಶವಂತಪುರದಿಂದ ಹೊರಡಲಿದ್ದು ಅಕ್ಟೋಬರ್ 31ರಂದು ಮಧ್ಯಾಹ್ನ 11:45 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ನಂಬರ್ 06566 ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ರೈಲು ಅಕ್ಟೋಬರ್ 31 ರಂದು ಮಧ್ಯಾಹ್ನ 1:00ಗೆ ಮಂಗಳೂರು ಜಂಕ್ಷನ್ ನಿಂದ ಹೊರಡಲಿದ್ದು, ರಾತ್ರಿ 9:45 ಕ್ಕೆ ಬೆಂಗಳೂರು ತಲುಪಲಿದೆ.
ಕುಣಿಗಲ್, ಚನ್ನರಾಯನಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ, ಪುತ್ತೂರು, ಬಂಟ್ವಾಳ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now