ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ : ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ – ಕೇಂದ್ರ ಸರಕಾರಕ್ಕೆ ಮಾಜಿ ಸಂಸದ ಜೆ.ಪಿ. ಹೆಗ್ಡೆ ಆಗ್ರಹ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ : ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ – ಕೇಂದ್ರ ಸರಕಾರಕ್ಕೆ ಮಾಜಿ ಸಂಸದ ಜೆ.ಪಿ. ಹೆಗ್ಡೆ ಆಗ್ರಹ
0Shares

ಉಡುಪಿ: ನೀಟ್‌ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ

ಸಾಮಾಜಿಕ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದು ಹಾಗೂ ಲಡಾಖ್ ಜನರಿಗೆ ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕೆಂದು ಹೋರಾಟಗಾರ ಸೋನಂ ವಾಂಗ್ಟುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಮಾಜಿ ಸಂಸದ ಹಾಗೂ ಹಿರಿಯ ರಾಜಕೀಯ ಮುಖ೦ಡ ಕೆ. ಜಯಪ್ರಕಾಶ್ ಹೆಗ್ಡೆ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಸೋನಂ ವಾಂಗ್ಲುಕ್ ಸುಮಾರು ಮೂರು ವಾರಗಳಿಂದ ಶಾಂತಿಯುತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಅದು ವೈಯಕ್ತಿಕ ಲಾಭಕ್ಕಾಗಿ ಅಲ್ಲ; ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಲಡಾಖ್ ಜನರ ನ್ಯಾಯಯುತ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಸೋನಂ ವಾಂಗ್ಟುಕ್ ಸುಮಾರು ಮೂರು ವಾರಗಳಿಂದ ಶಾಂತಿಯುತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಅದು ವೈಯಕ್ತಿಕ ಲಾಭಕ್ಕಾಗಿ ಅಲ್ಲ; ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಲಡಾಖ್ ಜನರ ನ್ಯಾಯಯುತ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now