
ಮಲ್ಪೆ : ಇಲ್ಲಿಯ ಮಧ್ವನಗರದ ರಿಕ್ಷಾ ಚಾಲಕ ಮಾಲಕನೊರ್ವ ತಾನು ವಾಸಿಸುತ್ತಿದ್ದ ಮನೆಯಲ್ಲಿ ನೇಣು ಬಿಗಿ
ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಿ ಉಡುಪಿ ರಿಕ್ಷಾ ನಿಲ್ದಾಣದ ಸದಸ್ಯನಾಗಿರುವ ಸುರೇಂದ್ರ ಮಧ್ವನಗರ (42) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಅತ್ಯಂತ ಸರಳ ಸ್ವಭಾವದವರಾಗಿದ್ದ ಇವರು, ಒಂದು ವಾರದ ಹಿಂದೆ ಅಷ್ಟೇ ಹೊಸ ರಿಕ್ಷಾವನ್ನು ಖರೀದಿಸಿದ್ದರು. ಮಧ್ಯರಾತ್ರಿ 12 ಗಂಟೆಯ ಬಳಿಕ ಮತ್ತು ನಾಲ್ಕು ಗಂಟೆಯ ಒಳಗೆ ತಾನು ವಾಸಿಸುತ್ತಿದ್ದ ತನ್ನ ತಾಯಿಯ ಮನೆಯಲ್ಲಿ, ಇತರ ಕುಟುಂಬ ಸದಸ್ಯರು ಮಲಗಿದ್ದಾಗ ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now