
ಜೋಯಿಡಾ: ಜೋಯಿಡಾ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಕಡೆ ರಸ್ತೆಗಳು ಹಾನಿಗೊಳಗಾಗಿದ್ದು,ಗೋವಾ ಸಂಪರ್ಕಿಸುವ ಜಗಲಬೇಟ್-ಕ್ಯಾಸಲ್ ರಾಕ್ ರಸ್ತೆಯ ಅಸು ಸಮೀಪ ರಸ್ತೆ ಬದಿಯ ಮಣ್ಣು ಕುಸಿದಿದ್ದು, ರಸ್ತೆಯ ಒಂದು ಭಾಗ ಅಪಾಯದ ಸ್ಥಿತಿಗೆ ತಲುಪಿದೆ. ರಸ್ತೆ ಬದಿಯಲ್ಲಿ ಅಳವಡಿಸಿದ್ದ ನೀರು ಹರಿಸುವ ಪೈಪ್ ಮೇಲಿನ ಮಣ್ಣು ಕೊಚ್ಚಿಹೋಗಿರುವುದರಿಂದ ಮತ್ತಷ್ಟು ರಸ್ತೆ ಕುಸಿಯುವ ಸಾಧ್ಯತೆ ಎದುರಾಗಿದೆ. ಈ ಮಾರ್ಗದಲ್ಲಿ ಪ್ರತಿದಿನ ಸಾರ್ವಜನಿಕ ಬಸ್ ಸೇರಿದಂತೆ ನೂರಾರು ವಾಹನಗಳು ಸಂಚರಿಸುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ.
ರಾತ್ರಿ ವೇಳೆ ಅಪಘಾತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿರುವ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ರಸ್ತೆ ಕುಸಿದ ಸ್ಥಳದಲ್ಲಿ ಮರದ ಕೊಂಬೆಗಳನ್ನು ನೆಟ್ಟು ವಾಹನ ಸವಾರರಿಗೆ ಎಚ್ಚರಿಕೆಯ ಕ್ರಮ ಕೈಗೊಂಡಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now