
ಶಿರಸಿ: ಇಂದು ಬೆಳಿಗ್ಗೆ ಶಿರಸಿ–ಕಿರವತ್ತಿ ರಸ್ತೆಯ ಅಚನಳ್ಳಿ ಸಮೀಪದ ಭೂತಪ್ಪ ದೇವಸ್ಥಾನದ ಬಳಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಗಟಾರಕ್ಕಿಳಿದು ಒಂದು ಬದಿಗೆ ವಾಲಿದ ಘಟನೆ ನಡೆದಿದೆ.
ಕಿರವತ್ತಿಯಿಂದ ಶಿರಸಿಗೆ ಬರುತ್ತಿದ್ದ ಈ ಬಸ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವು ಪ್ರಯಾಣಿಕರು ಇದ್ದರು. ಎದುರಿನಿಂದ ಅತಿವೇಗವಾಗಿ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿದ್ದ ವೇಳೆ ಚಾಲಕ ಬಸ್ ಅನ್ನು ರಸ್ತೆ ಬದಿಗೆ ತಿರುಗಿಸಿದ್ದು, ನಿಯಂತ್ರಣ ತಪ್ಪಿ ಗಟಾರಕ್ಕಿಳಿದು ಧರೆಗೆ ವಾಲಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಪ್ರಯಾಣಿಕರು ಸುರಕ್ಷಿತವಾಗಿ ಬಸ್‌ನಿಂದ ಹೊರಬಂದರು. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಗಾಯ ಅಥವಾ ಪ್ರಾಣಾಪಾಯ ಸಂಭವಿಸಿಲ್ಲ. ಬಳಿಕ ವಿದ್ಯಾರ್ಥಿಗಳು ಹಾಗೂ ಇತರ ಪ್ರಯಾಣಿಕರು ಪರ್ಯಾಯ ವಾಹನಗಳ ಮೂಲಕ ಶಿರಸಿಗೆ ತೆರಳಿದರು.
ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now