
ಕಾರ್ಕಳ : ಸೈಬರ್ ಅಪರಾಧ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಜಾಗೃತಿ ಅತ್ಯಂತ ಮುಖ್ಯವಾಗಿದೆ. ಎಪಿಕೆ ಫೈಲ್‌ಗಳು, ಅನುಮಾನಾಸ್ಪದ ಲಿಂಕ್‌ಗಳು ಹಾಗೂ ಅಪರಿಚಿತ ಮೊಬೈಲ್ ಅಪ್ಲಿಕೇಷನ್ ಯಾವುದೇ ಕಾರಣಕ್ಕೂ ಡೌನ್‌ಲೋಡ್ ಮಾಡಬಾರದು ಎಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಸನ್ನ ಸಲಹೆ ನೀಡಿದರು.
ಪತ್ರಿಕಾ ಭವನದಲ್ಲಿ ನಡೆದ ಪೊಲೀಸ್ ಇಲಾಖೆ ಸಂವಾದ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.
ಹಿಂದಿನ ಅವಧಿಗೆ ಹೋಲಿಸಿದರೆ ಸೈಬರ್ ಅಪರಾಧ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ.
ದಾಖಲಾದ ಪ್ರಕರಣಗಳಲ್ಲಿ ಸುಮಾರು ಶೇ.80ರಷ್ಟು ಪತ್ತೆ ಕಾರ್ಯ ಯಶಸ್ವಿಯಾಗಿ ನಡೆಸಲಾಗಿದೆ. ಆದರೂ ಸಾರ್ವಜನಿಕರು ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯ ಅಪರಿಚಿತರು ಕಳುಹಿಸುವ ಎಪಿಕೆ ಫೈಲ್‌ಗಳನ್ನು ಕ್ಲಿಕ್ ಮಾಡುವುದರಿಂದ ಮೊಬೈಲ್‌ನಲ್ಲಿರುವ ವೈಯಕ್ತಿಕ ಮಾಹಿತಿ, ಬ್ಯಾಂಕ್ ಖಾತೆ ವಿವರಗಳು ಹಾಗೂ ಒಟಿಪಿ ಮಾಹಿತಿಗಳು ದುರುಪಯೋಗವಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿ ಅಥವಾ ಮಾಹಿತಿಯನ್ನು ಅದರ ಸತ್ಯಾಸತ್ಯತೆ ಪರಿಶೀಲಿಸದೆ ಹಂಚಿಕೊಳ್ಳಬಾರದು. ಆಧಾರ ರಹಿತ, ಸುಳ್ಳು ಸುದ್ದಿ ವ್ಯಕ್ತಿಯ ತೇಜೋವಧೆ ಮಾಡುವ ಅಥವಾ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ರೀತಿಯ ಪೋಸ್ಟ್‌ಗಳು ಮತ್ತು ಸಂದೇಶಗಳನ್ನು ಪ್ರಸಾರ ಮಾಡಿದರೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now