
ವಿಟ್ಲ: ಬಹರೈನ್ನಲ್ಲಿ ಉದ್ಯೋಗದಲ್ಲಿದ್ದ ಹಾಗೂ ವಾರದ ಹಿಂದಷ್ಟೇ ಸ್ವಗ್ರಾಮಕ್ಕೆ ಆಗಮಿಸಿದ್ದ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಬೆಂಗೋಡಿ ನಿವಾಸಿ ದಿವಾಕರ ಶೆಟ್ಟಿ (52) ಅವರು ಭಾನುವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾದರು.
ಬೆಂಗೋಡಿ ಸೀತಾರಾಮ ಶೆಟ್ಟಿ ಹಾಗೂ ಪುಷ್ಪಾವತಿ ದಂಪತಿಯ ಪುತ್ರರಾಗಿದ್ದ ದಿವಾಕರ ಶೆಟ್ಟಿ ಅವರು ಬಹರೈನ್ನ ಖಾಸಗಿ ರೆಸ್ಟೋರೆಂಟ್ನಲ್ಲಿ ಉದ್ಯೋಗಿಯಾಗಿದ್ದರು. ಕ್ರಿಕೆಟ್ ಮೇಲಿನ ಅಪಾರ ಆಸಕ್ತಿಯಿಂದ ಉತ್ತಮ ಆಟಗಾರರಾಗಿಯೂ ಗುರುತಿಸಿಕೊಂಡಿದ್ದರು.
ಭಾನುವಾರ ಸಂಜೆ 7ರಿಂದ ರಾತ್ರಿ 9 ಗಂಟೆಯವರೆಗೆ ವಿಟ್ಲ ಹೊರವಲಯದ ಚಂದಳಿಕೆಯ ‘ಗ್ರೀಮ್ ಸ್ಪೋರ್ಟ್ಸ್ ಕ್ಲಬ್’ನ ಒಳಾಂಗಣ ಟರ್ಫ್ ಮೈದಾನದಲ್ಲಿ ಸ್ನೇಹಿತರು ಹಾಗೂ ಸಂಬಂಧಿಕರೊಂದಿಗೆ ಕ್ರಿಕೆಟ್ ಆಡಿದ್ದರು. ಆಟ ಮುಗಿಸಿ ಮನೆಗೆ ತೆರಳಲು ಸಿದ್ಧವಾಗುತ್ತಿದ್ದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ.
ತಕ್ಷಣವೇ ಅವರನ್ನು ವಿಟ್ಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದರು. ಆದರೆ ಪುತ್ತೂರಿನ ಆಸ್ಪತ್ರೆಗೆ ತಲುಪುವಷ್ಟರಲ್ಲಿ ದಿವಾಕರ ಶೆಟ್ಟಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now