ತೀರ್ಥಹಳ್ಳಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವನ ಮಹೋತ್ಸವ ಕಾರ್ಯಕ್ರಮ ಯಶಸ್ವಿ

ತೀರ್ಥಹಳ್ಳಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವನ ಮಹೋತ್ಸವ ಕಾರ್ಯಕ್ರಮ ಯಶಸ್ವಿ
0Shares

ತೀರ್ಥಹಳ್ಳಿ: ತೀರ್ಥಹಳ್ಳಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅರಣ್ಯ ಇಲಾಖೆಯ ಸಹಯೋಗದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಮುಖ್ಯ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಸಾರ್ವಜನಿಕ ಕ್ರೀಡಾಂಗಣದಲ್ಲಿ ವನ ಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೀರ್ಥಹಳ್ಳಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುನ್ನೂರು ಮೋಹನ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಮಧುಸೂದನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪರಿಸರ ಸಂರಕ್ಷಣೆ ಹಾಗೂ ವೃಕ್ಷಾರೋಪಣೆಯ ಮಹತ್ವವನ್ನು ತಿಳಿಸಿದರು. ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು, ಅದನ್ನು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ತೀರ್ಥಹಳ್ಳಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುನ್ನೂರು ಮೋಹನ್ ಶೆಟ್ಟಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ವೃಕ್ಷಾರೋಪಣದಲ್ಲಿ ಪಾಲ್ಗೊಂಡು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.

ಕಾರ್ಯಕ್ರಮವು ಪರಿಸರ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಯಶಸ್ವಿಯಾಗಿ ನೆರವೇರಿತು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now